ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕಂಗನಾ ನಿವಾಸಕ್ಕೆ ಪೊಲೀಸ್ ಭದ್ರತೆ
ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಮುಂಬೈ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Published: 22nd November 2021 04:26 PM | Last Updated: 22nd November 2021 04:26 PM | A+A A-

ಕಂಗನಾ
ಮುಂಬೈ: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಮುಂಬೈ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣ ಕಂಗನಾ ಅವರ ನಿವಾಸದ ಎದುರು ಕೆಲವರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಯುವ ಕಾಂಗ್ರೆಸ್ ಹಾಗೂ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಕಂಗನಾ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ಸಲ್ಲಿಸಿದ್ದಾರೆ.
ನಟಿ ಕಂಗನಾ ಅವರನ್ನು ಮಾನಸಿಕ ಆಸ್ಪತ್ರೆಗೆ ಕಳುಹಿಸಬೇಕು. ಇಲ್ಲ ಬಂಧಿಸಿ ಜೈಲಿನಲ್ಲಿ ಇಡಬೇಕು ಎಂದು ಸಿರ್ಸಾ ಟ್ವೀಟ್ ಮೂಲಕ ಒತ್ತಾಯಿಸಿದ್ದು, ಮಹಾರಾಷ್ಟ್ರದ ಗೃಹ ಸಚಿವರನ್ನು ಭೇಟಿಯಾಗಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.