ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು

ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಯಲ್ ರೋಹಟಗಿ
ಪಾಯಲ್ ರೋಹಟಗಿ

ಪುಣೆ: ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಪೊಲೀಸರು ಐಪಿಸಿಯ ಸೆಕ್ಷನ್ 153(ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500(ಮಾನನಷ್ಟಕ್ಕೆ ಶಿಕ್ಷೆ), 505(2)(ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಅಡಿಯಲ್ಲಿ ನಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ನಟಿ ಅಪರಿಚಿತ ವ್ಯಕ್ತಿಯೊಂದಿಗೆ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಗಾಂಧಿ ಕುಟುಂಬದ ಇತರ ಸದಸ್ಯರ ಬಗ್ಗೆ ಅವಹೇಳನಕಾರಿ ವೀಡಿಯೊವನ್ನು ರಚಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ವಿಡಿಯೋವನ್ನು ಗಮನಿಸಿ, ಕಾಂಗ್ರೆಸ್ ನಾಯಕಿ ಸಂಗೀತಾ ತಿವಾರಿ ಮತ್ತು ಪಕ್ಷದ ಪುಣೆ ನಗರ ಘಟಕದ ಪದಾಧಿಕಾರಿಗಳು ರೋಹಟಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ಪೊಲೀಸರನ್ನು ಸಂಪರ್ಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com