ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ.
Published: 22nd September 2021 01:05 AM | Last Updated: 22nd September 2021 01:05 AM | A+A A-

ದೀಪಿಕಾ ಪಡುಕೋಣೆ-ಪಿವಿ ಸಿಂಧು
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿರುಕೊಂಡಿರುವ ನಟಿ ದೀಪಿಕಾ ಪಡುಕೋಣೆ, ಸಿಂಧು ಜೊತೆ ತಮ್ಮ ಕ್ಯಾಲರಿ ಬರ್ನ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪಿವಿ ಸಿಂಧು ಎಷ್ಟು ಕ್ಯಾಲರಿ ಬರ್ನ್ ಆಯಿತು ಎಂದು ಅವರ ಕಾಲು ಎಳೆದು ಪ್ರತಿಕ್ರಿಯಿಸಿದ್ದರು. ನಟಿ ದೀಪಿಕಾ ಇತ್ತೀಚಿನ ದಿನಗಳಲ್ಲಿ ಒಲಂಪಿಕ್ ವಿಜೇತೆ ಪಿವಿ ಸಿಂಧು ಅವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುತ್ತಿದದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಂಧುಗಾಗಿ ಔತಣ ಕೂಟ ಆಯೋಜಿಸಿದ್ದರು ದಿಪೀಕಾ ಮುಂಬೈನ ರೆಸ್ಟೋರೆಂಟ್ನಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ವಿಶೇಷ ಔತಣ ಕೂಟ ಆಯೋಜಿಸಿದ್ದರು.
ಇನ್ನು ನಟಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆ ಕೂಡ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ನಟಿ ದೀಪಿಕಾ ಕೂಡ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಟುವಾಗಿದ್ದು, ಅನೇಕ ಸಂದರ್ಭದಲ್ಲಿ ರ್ಯಾಕೆಟ್ ಬೀಸುವ ಮೂಲಕ ಇದನ್ನು ಸಾಬೀತು ಮಾಡಿದ್ದಾರೆ. ಈ ವಿಶೇಷ ಪಂದ್ಯಕ್ಕಾಗಿ ದೀಪಿಕಾ ಕಪ್ಪು ಧಿರಿಸು ಧರಿಸಿದ್ದರು. ಸಿಂಧೂ ಕೂಡ ಅದೇ ರೀತಿಯ ಬಟ್ಟೆ ಧರಿಸಿದ್ದು ವಿಶೇಷವಾಗಿತ್ತು. ಸಿಂಧು ನೇರಳೆ ಮತ್ತು ಗುಲಾಬಿ ಬಣ್ಣಗಳ ಟಾಪ್ ಧರಿಸಿದ್ದರು.
ಒಲಂಪಿಕ್ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿ ದೀಪಿಕಾ ಗಮನ ಸೆಳೆದಿದ್ದಾರೆ. ಅಲ್ಲದೆ ಈ ಫೋಟೋಗಳನ್ನು ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಬೆವರಿಳಿಸುವಂತೆ ಆಟವಾಡಿದ್ದು, ಈ ಆಟದಲ್ಲಿ ಯಾರಿಗೆ ಗೆಲುವು ಆಯಿತು ಎಂಬುದನ್ನು ಮಾತ್ರ ತಿಳಿಸಿಲ್ಲ. ಆದರೆ, ನಟಿ ದೀಪಿಕಾ ಈ ಆಟದಿಂದ ತಮ್ಮ ಮುಖದ ಕಾಂತಿ ಹೆಚ್ಚಿತು ಎಂದಿದ್ದಾರೆ. ತಮ್ಮ ಕ್ಯಾಲರಿ ಬರ್ನ್ ಆಗಿ ಮುಖದಲ್ಲಿ ಬೆವರಿಳಿದಿದೆ. ಇದರಿಂದ ಮುಖದ ಕಾಂತಿ ಹೆಚ್ಚಿದೆ ಎಂದು ನಟಿ ದೀಪಿಕಾ ಬರೆದುಕೊಂಡಿದ್ದರು.
ದೀಪಿಕಾ ಅವರ ಈ ಪೋಸ್ಟ್ ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು ಗಂಟೆಯ ಅವಧಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.