ರಶ್ಮಿಕಾ ಮಂದಣ್ಣ
ಬಾಲಿವುಡ್
ಬಾಲಿವುಡ್‌ನಿಂದ ಬಂತು ಬಿಗ್ ಆಫರ್: ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ?
ನಟಿ ರಶ್ಮಿಕಾ ಮಂದಣ್ಣ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ನಟಿ ರಶ್ಮಿಕಾ ಮಂದಣ್ಣ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ಬುಧವಾರ ರಾತ್ರಿ ಖ್ಯಾತ ಚಲನಚಿತ್ರ ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.
ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು ಇದೇ ಮೊದಲಾ ಎಂಬುದು ಸ್ಪಷ್ಟವಾಗಿಲ್ಲ.
ಬಾಲಿವುಡ್‌ನ `ಮಿಷನ್ ಮಜ್ನು’ ಸಿನಿಮಾ ರಿಲೀಸ್ ಬೆನ್ನಲ್ಲೇ ರಶ್ಮಿಕಾ ಹೊಸ ಸಿನಿಮಾದ ಗುಡ್ ನ್ಯೂಸ್ ಕೇಳಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ. ಅದೇನೇ ಇರಲಿ, ರಶ್ಮಿಕಾ ಅವರ ಬಾಲಿವುಡ್ ಪ್ರಯಾಣದ ಬಗ್ಗೆ ಎಲ್ಲರೂ ಉತ್ಸುಕರಾಗಿದ್ದಾರೆ. ರಶ್ಮಿಕಾ ಬಾಲಿವುಡ್‌ನ ಬಿಗ್ ಪ್ರಾಜೆಕ್ಟ್‌ನಲ್ಲಿ ಕಾಣಿಸಿಕೊಳ್ಳಬಹುದು ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ