ಹೃದಯ ಬಡಿತದಲ್ಲಿ ಏರುಪೇರು: ನಟಿ ದೀಪಿಕಾ ಪಡುಕೋಣೆಗೆ ಚಿಕಿತ್ಸೆ!

ಶೂಟಿಂಗ್ ಸಮಯದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ
Updated on: 

ಹೈದರಾಬಾದ್: ಶೂಟಿಂಗ್ ಸಮಯದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಇದೀಗ ದೀಪಿಕಾ ಪಡುಕೋಣೆ ಶೂಟಿಂಗ್ ಕಾರಣ ಹೈದರಾಬಾದಿನಲ್ಲಿ ಇದ್ದಾರೆ. ಶೂಟಿಂಗ್ ವೇಳೆ ಹೃದಯ ಬಡಿತ ಹೆಚ್ಚಳವಾದ ಕಾರಣ ಹೈದರಾಬಾದ್‌ನ ಕಾಮಿನೇನಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಶೂಟಿಂಗ್ ಸೆಟ್ ಗೆ ಮರಳಿದ್ದಾರೆ. ಇದೀಗ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲದೇ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ.

ದೀಪಿಕಾ ಪಡುಕೋಣೆ ಅವರು ಮುಂದಿನ ಚಿತ್ರದ ಶೂಟಿಂಗ್ ಹೈದರಾಬಾದಿನಲ್ಲಿ ನಡೆಯುತ್ತಿದ್ದು, ಶೂಟಿಂಗ್ ನಲ್ಲಿ ನಿರತರಾಗಿದ್ದರು. ಆಗ ಕೊಂಚ ಹೃದಯ ಬಡಿತ ಹೆಚ್ಚಾಗಿ, ಸುಸ್ತಾಗಿದೆ ಎಂದು ಹೇಳಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡು ಸೆಟ್ ಗೆ ಮರಳಿದ್ದಾರೆ. ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್, ಪ್ರಭಾಸ್ ಅಭಿನಯಿಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com