ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಆರೋಪಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್  ಹೊರಡಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.
ವೈಶಾಲಿ
ವೈಶಾಲಿ

ಭೋಪಾಲ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್  ಹೊರಡಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.

ಇಂದೋರ್‌ನ ವೈಶಾಲಿ ಠಕ್ಕರ್ (29) ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ನೆರೆಹೊರೆಯಲ್ಲೇ ವಾಸಿಸುತ್ತಿದ್ದ ಆರೋಪಿಗಳಾದ ರಾಹುಲ್ ನವ್ಲಾನಿ ಮತ್ತು ಅವರ ಪತ್ನಿ ದಿಶಾ ನವ್ಲಾನಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ದಂಪತಿಯನ್ನು ಪತ್ತೆಮಾಡಿಕೊಟ್ಟವರಿಗೆ ತಲಾ 5,000 ರೂಪಾಯಿ ಬಹುಮಾನವನ್ನೂ ಘೋಷಿಸಲಾಗಿದೆ ಎಂದು ಮಿಶ್ರಾ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಹಿಂದಿಯ 'ಸಸುರಲ್ ಸಿಮಾರ್ ಕಾ' ಧಾರಾವಾಹಿಯಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಠಕ್ಕರ್ ಅವರು ಭಾನುವಾರ ಇಂದೋರ್‌ನ ಸಾಯಿಬಾಗ್ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮೊದಲು ತಿಳಿಸಿದ್ದರು.

ಸ್ಥಳದಲ್ಲಿ ಠಕ್ಕರ್ ಅವರಿಗೆ ಕಿರುಕುಳ ನೀಡಿದ್ದಕ್ಕಾಗಿ ರಾಹುಲ್ ನವ್ಲಾನಿ ಎಂದು ಹೆಸರಿಸಿರುವ ಐದು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಆಕೆಯು ಮದುವೆಯಾಗಲು ನಿರ್ಧರಿಸಿರುವ ಬಗ್ಗೆ ತಿಳಿದಾಗಿನಿಂದ ರಾಹುಲ್ ನವ್ಲಾನಿ ತೊಂದರೆ ನೀಡುತ್ತಿದ್ದ ಎಂದು ಠಕ್ಕರ್ ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣದ ಆರೋಪಿ ದಂಪತಿ ದೇಶದಿಂದ ಪಲಾಯನ ಮಾಡುವುದನ್ನು ತಡೆಯಲು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ. ಸದ್ಯ ಅಮೆರಿಕದಲ್ಲಿರುವ ಠಕ್ಕರ್ ಅವರ ಭಾವಿ ಪತಿಯನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಆರೋಪಿ ದಂಪತಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com