ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿ ಬಂಧನ

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಿರುತೆರೆ ನಟಿ ವೈಶಾಲಿ ಠಕ್ಕರ್
ಕಿರುತೆರೆ ನಟಿ ವೈಶಾಲಿ ಠಕ್ಕರ್

ಇಂದೋರ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಆರೋಪಿ ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು ಇತರ ಸಾಧನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ, 'ಸಸುರಲ್ ಸಿಮಾರ್ ಕಾ' ಧಾರಾವಾಹಿಯಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ವೈಶಾಲಿ ಠಕ್ಕರ್ (29) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ರಾಹುಲ್ ನವ್ಲಾನಿ ಮತ್ತು ಆತನ ಪತ್ನಿ ದಿಶಾ ಬಗ್ಗೆ ಮಾಹಿತಿ ನೀಡಿದವರಿಗೆ 5,000 ರೂಪಾಯಿ ಬಹುಮಾನ ನೀಡುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಘೋಷಿಸಿದ್ದರು.

ದಂಪತಿ ಹೆಸರಿನಲ್ಲಿ ಲುಕ್‌ಔಟ್ ನೋಟಿಸ್ ಅನ್ನು ಹೊರಡಿಸಲಾಗಿದೆ.

ಆರೋಪಿ ದಂಪತಿ ವೈಶಾಲಿ ಠಕ್ಕರ್‌ ಅವರ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಪ್ರದೇಶದ ಇಂದೋರ್ ನಗರದ ಸಾಯಿಬಾಗ್ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆಯಾಗಿತ್ತು.

ಠಕ್ಕರ್ ಅವರಿಗೆ ಕಿರುಕುಳ ನೀಡಿದ್ದಕ್ಕಾಗಿ ರಾಹುಲ್ ನವ್ಲಾನಿ ಎಂದು ಹೆಸರಿಸಿರುವ ಐದು ಪುಟಗಳ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು.

'ಪೊಲೀಸ್ ತಂಡಗಳು ದಂಪತಿಗಾಗಿ ಹುಡುಕುತ್ತಿದ್ದವು. ರಾಹುಲ್ ಇಂದೋರ್‌ನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆಯೇ ಆತನನ್ನು ಬಂಧಿಸಲಾಗಿದೆ. ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ' ಎಂದು ತೇಜಾಜಿ ನಗರ ಪೊಲೀಸ್ ಠಾಣೆಯ ಪ್ರಭಾರಿ ಆರ್ ಡಿ ಕಣ್ವಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅವರ ಪತ್ನಿಯನ್ನು ಸಹ ಬಂಧಿಸಲಾಗಿದೆಯೇ ಎಂದು ಕೇಳಿದಾಗ, ತನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ಕಣ್ವ ಹೇಳಿದರು.

ಬಂಧಿತ ಆರೋಪಿಯಿಂದ ವಶಪಡಿಸಿಕೊಂಡ ಗ್ಯಾಜೆಟ್‌ಗಳಿಂದ ಪೊಲೀಸರು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಮಾಹಿತಿಯನ್ನು ವಿಶ್ಲೇಷಿಸಿ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು  ಎಂದು ರಾಜ್ಯ ಗೃಹ ಸಚಿವ ಮಿಶ್ರಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com