ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ರ ಮಧ್ಯಂತರ ಜಾಮೀನನ್ನು ವಿಸ್ತರಿಸಿದ ದೆಹಲಿ ನ್ಯಾಯಾಲಯ

₹200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶನಿವಾರ ನವೆಂಬರ್ 10 ರವರೆಗೆ ವಿಸ್ತರಿಸಿದೆ.
ಜಾಕ್ವೆಲಿನ್ ಫರ್ನಾಂಡಿಸ್
ಜಾಕ್ವೆಲಿನ್ ಫರ್ನಾಂಡಿಸ್

ಸುಕೇಶ್ ಚಂದ್ರಶೇಖರ್ ಮತ್ತು ಇತರರನ್ನು ಒಳಗೊಂಡ ₹ 200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶನಿವಾರ ನವೆಂಬರ್ 10 ರವರೆಗೆ ವಿಸ್ತರಿಸಿದೆ.

ಸಾಮಾನ್ಯ ಜಾಮೀನು ಮತ್ತು ಇತರ ಬಾಕಿ ಇರುವ ಅರ್ಜಿಗಳ ವಿಚಾರಣೆಯನ್ನು ನವೆಂಬರ್ 10ಕ್ಕೆ ನಿಗದಿಪಡಿಸಲಾಗಿದೆ. ನ್ಯಾಯಾಲಯವು ಎಲ್ಲಾ ಕಕ್ಷಿದಾರರಿಗೆ ಚಾರ್ಜ್ ಶೀಟ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ನೀಡುವಂತೆ ಇ.ಡಿಗೆ ಸೂಚಿಸಿದೆ.

ಬಾಲಿವುಡ್ ನಟಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಿಗದಿಪಡಿಸಿತ್ತು. ವಿಚಾರಣೆಯ ಕೊನೆಯ ದಿನಾಂಕದಂದು ನ್ಯಾಯಾಲಯವು ಜಾಕ್ವೆಲಿನ್‌ಗೆ ಮಧ್ಯಂತರ ಜಾಮೀನು ನೀಡಿತ್ತು.

ಫರ್ನಾಂಡಿಸ್ ಅವರು ತಮ್ಮ ವಕೀಲ ಪ್ರಶಾಂತ್ ಪಾಟೀಲ್ ಅವರೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.
ನಟಿಯ ಜಾಮೀನು ಅರ್ಜಿಗೆ ಉತ್ತರಿಸುವಂತೆ ಇ.ಡಿಗೆ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಲಾಗಿದೆ.

ಆಗಸ್ಟ್ 17 ರಂದು, ದೆಹಲಿ ನ್ಯಾಯಾಲಯದಲ್ಲಿ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ತನಿಖಾ ಸಂಸ್ಥೆ ಸಲ್ಲಿಸಿದ ಪೂರಕ ಚಾರ್ಜ್ ಶೀಟ್‌ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹೆಸರನ್ನು ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಇ.ಡಿಯ ಹಿಂದಿನ ಚಾರ್ಜ್ ಶೀಟ್ ಪ್ರಕಾರ, ಫರ್ನಾಂಡಿಸ್ ಮತ್ತು ಮತ್ತೋರ್ವ ನಟಿ ನೋರಾ ಫತೇಹಿ ಅವರು ಆರೋಪಿಗಳಿಂದ ಬಿಎಂಡಬ್ಲ್ಯು ಕಾರುಗಳನ್ನು ಮತ್ತು ಅತ್ಯಂತ ದುಬಾರಿ ಉಡುಗೊರೆಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com