ಕಾಶ್ಮೀರ: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ; ಎಫ್ ಐಆರ್ ದಾಖಲು
ಪಹಲ್ಗಾಮ್ (ಜಮ್ಮು-ಕಾಶ್ಮೀರ): ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.
ಮೂಲಗಳ ಪ್ರಕಾರ, ಶೂಟಿಂಗ್ ಮುಗಿಸಿ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ಹೋದಾಗ ಅಪರಿಚಿತರು ಇಮ್ರಾನ್ ಹಸ್ಮಿ ಮೇಲೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 147, 148, 370, 336, 323 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಗ್ರೌಂಡ್ ಜೀರೋ ಚಿತ್ರವನ್ನು ತೇಜಸ್ ದಿಯೋಸ್ಕರ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯತನಕ ಪೊಲೀಸರು ಯಾರನ್ನು ಬಂದಿಸಿಲ್ಲ ಎಂದು ಹೇಳಿದ್ದಾರೆ.
ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗುತ್ತಿದ್ದು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಈ ಸಂಬಂಧ ಪಹಲ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ