
ಮಲೈಕಾ ಅರೋರಾ
ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ಖೋಪೋಲಿ ಬಳಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಎಸ್‌ಯುವಿ ಕಾರು ಅಪಘಾತಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅರೋರಾ ಪುಣೆಯಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಫುಡ್-ಮಾಲ್ ಬಳಿ ಸಂಜೆ 4.45 ರ ಸುಮಾರಿಗೆ ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿದ್ದ ಎಂಎನ್‌ಎಸ್ ನಾಯಕರೊಬ್ಬರು ನಟಿಯನ್ನು ತನ್ನ ಕಾರಿನಲ್ಲಿ ಮುಂಬೈಗೆ ಕರೆದೊಯ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.