ನಟಿ ಸೋನಂ ಕಪೂರ್ ಮನೆಯಲ್ಲಿ ಕೋಟಿ ಕೋಟಿ ಕಳ್ಳತನ; ಮನೆಯಲ್ಲೇ ಇದ್ದು ಹೊಂಚು ಹಾಕಿದ್ದ 'ಖತರ್ನಾಕ್ ನರ್ಸ್' ಅರೆಸ್ಟ್!!
ಖ್ಯಾತ ಬಾಲಿವುಡ್ ನಟಿ ಸೋನಂ ಕಪೂರ್ ಅವರ ದೆಹಲಿ ನಿವಾಸದಲ್ಲಿನ ಕೋಟಿ ಕೋಟಿ ರೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Published: 13th April 2022 07:42 PM | Last Updated: 14th April 2022 01:06 PM | A+A A-

ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ದೆಹಲಿ ನಿವಾಸ
ನವದೆಹಲಿ: ಖ್ಯಾತ ಬಾಲಿವುಡ್ ನಟಿ ಸೋನಂ ಕಪೂರ್ ಅವರ ದೆಹಲಿ ನಿವಾಸದಲ್ಲಿನ ಕೋಟಿ ಕೋಟಿ ರೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಚ್ಚರಿ ಎಂದರೆ ಈ ಭಾರಿ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವುದು ನಟಿ ಸೋನಂ ಕಪೂರ್ ಮನೆಯಲ್ಲಿ ತಿಂಗಳುಗಳ ಗಟ್ಟಲೆ ನರ್ಸ್ ಆಗಿ ಸೇವೆ ಸಲ್ಲಿಸಿದ್ದ ಮಹಿಳೆ ಮತ್ತು ಆಕೆಯ ಗಂಡ... ಸೋನಂ ಕಪೂರ್ (Sonam Kapoor) ಹಾಗೂ ಆನಂದ್ ಅಹುಜಾ (Anand Ahuja) ದೆಹಲಿ ನಿವಾಸದಲ್ಲಿ ನರ್ಸ್ ಆಗಿದ್ದ ಅಪರ್ಣಾ ವಿಲ್ಸನ್ ಹಾಗೂ ಅವಳ ಗಂಡ ನರೇಶ್ ಕುಮಾರ್ ಈ ಕಳ್ಳತನ ಮಾಡಿದ್ದರು.
ಘಟನೆ ವಿವರ
ದೆಹಲಿ ಮನೆಯಲ್ಲಿ ಸೋನಂ ವಾಸ ಮಾಡುತ್ತಿಲ್ಲ. ಆದರೆ, ಅವರ ಮಾವ ಹರೀಶ್ ಅಹುಜಾ ಹಾಗೂ ಅವರ ಅತ್ತೆ ಪ್ರಿಯಾ ಅಹುಜಾ ವಾಸವಾಗಿದ್ದಾರೆ. ಇವರ ಜತೆಗೆ ಆನಂದ್ ಅವರ ಅಜ್ಜಿ ಸರಳಾ ಅಹುಜಾ ಕೂಡ ಇವರ ಜತೆಗೇ ಇದ್ದಾರೆ. ಇತ್ತೀಚೆಗೆ ಪ್ರಿಯಾ ಅವರು ಕಬೋರ್ಡ್ ತೆಗೆದು ನೋಡಿದ್ದರು. ಈ ವೇಳೆ ಜ್ಯುವೆಲರಿ ಹಾಗೂ ನಗದು ಕಾಣೆ ಆಗಿರುವುದು ಗಮನಕ್ಕೆ ಬಂದಿತ್ತು. ಕಳೆದ ಎರಡು ವರ್ಷಗಳಿಂದ ಕೊವಿಡ್ ಇದ್ದ ಕಾರಣ ಪ್ರಿಯಾ ಹೆಚ್ಚು ಸುತ್ತಾಟ ನಡೆಸಿಲ್ಲ. ಈ ಕಾರಣಕ್ಕೆ ಅವರು ಜ್ಯುವೆಲರಿ ಬಳಕೆ ಮಾಡಿರಲಿಲ್ಲ. ಜ್ಯುವೆಲರಿ ಇರುವ ಕಬೋರ್ಡ್ ಕೊನೆಯ ಬಾರಿ ತಾವು ಪರಿಶೀಲಿಸಿದ್ದು ಎರಡು ವರ್ಷಗಳ ಹಿಂದೆ ಎಂದು ಅವರು ಹೇಳಿಕೊಂಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ದೆಹಲಿ ಮನೆಯಲ್ಲಿ 25 ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳಲಾಗಿದ್ದು, ಈ ಪೈಕಿ ಅಪರ್ಣಾ ಈ ಕಳ್ಳತನದ ಮುಖ್ಯ ರುವಾರಿ. ಈಕೆ ಪ್ರಿಯಾ ಅಹುಜಾ ಅವರ ಆರೈಕೆ ನೋಡಿಕೊಳ್ಳೋಕೆ ಇವರ ಮನೆಯಲ್ಲಿ ವಾಸವಾಗಿದ್ದಳು. ಆಕೆ ಈ ಹಣ ಹಾಗೂ ಚಿನ್ನವನ್ನು ಕದ್ದಿದ್ದಳು. ಈ ಕೃತ್ಯಕ್ಕೆ ಅವಳ ಪತಿ ಸುರೇಶ್ ಸಹಾಯ ಮಾಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹರೀಶ್ ಅಹುಜಾ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಅವರು ವಂಚನೆಗೆ ಒಳಗಾಗಿದ್ದರು. ಆನಂದ್ ಅವರಿಗೆ 27 ಕೋಟಿ ರೂಪಾಯಿ ವಂಚನೆ ನಡೆದಿತ್ತು. ಈ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿತ್ತು.