ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಭಾರೀ ವಿರೋಧ: ಕ್ಷಮೆ ಕೇಳಿ ಹಿಂದೆ ಸರಿದ ನಟ ಅಕ್ಷಯ್ ಕುಮಾರ್
ಗುಟ್ಕಾ ಜಾಹೀನಾತಿನಲ್ಲಿ ಕಾಣಿಸಿಕೊಂಡು ಜನರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ನಟ ಅಕ್ಷಯ್ ಕುಮಾರ್ ಅವರು ಗುರುವಾರ ಕ್ಷಮೆಯಾಚಿಸಿದ್ದಾರೆ.
Published: 21st April 2022 09:03 AM | Last Updated: 21st April 2022 12:59 PM | A+A A-

ಅಕ್ಷಯ್ ಕುಮಾರ್
ಮುಂಬೈ: ಗುಟ್ಕಾ ಜಾಹೀನಾತಿನಲ್ಲಿ ಕಾಣಿಸಿಕೊಂಡು ಜನರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ನಟ ಅಕ್ಷಯ್ ಕುಮಾರ್ ಅವರು ಗುರುವಾರ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್, ಇನ್ನು ಮುಂದೆ ವಿಮಲ್ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಹೇಳಿ, ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.
ಈ ಹಿಂದೆ ಅಕ್ಷಯ್ ಕುಮಾರ್ ಅವರು ‘ಸ್ವಸ್ಥ ಭಾರತ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಗುಟ್ಕಾ ಕುರಿತು ದೊಡ್ಡ ಭಾಷಣವನ್ನು ಮಾಡಿದ್ದರು.
ಇದನ್ನೂ ಓದಿ: ಬೆಲೆ ಏರಿಕೆ: ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಪ್ರತಿಭಟನೆ
ನನಗೆ ದೊಡ್ಡ ದೊಡ್ಡ ಗುಟ್ಕಾ ಕಂಪನಿಗಳಿಂದ ಆಫರ್ ಬರುತ್ತದೆ. ಅದರ ಜಾಹೀರಾತಿನಲ್ಲಿ ನಟಿಸಿದರೆ ನನಗೆ ಭಾರಿ ಪ್ರಮಾಣದ ಸಂಭಾವನೆ ನೀಡಲು ರೆಡಿ ಇರುತ್ತಾರೆ. ಆದರೆ ನಾನು ಅಂಥ ತಪ್ಪು ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಇದೀಗ ಗುಟ್ಕಾ ಜಾಹೀರಾತಿನಲ್ಲಿಯೇ ಅಕ್ಷಯ್ ನಟಿಸಿರುವುದಕ್ಕೆ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಕ್ಷಯ್ ಅವರು ಗುಟ್ಕಾ ವಿರುದ್ಧ ಮಾಡಿದ್ದ ಭಾಷಣ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ್ ಅಕ್ಷಯ್ ಕುಮಾರ್ ಕಿವಿ ಹಿಂಡುವ ಕೆಲಸ ಮಾಡಿದ್ದಾರೆ.
ಜನರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನಸ್ಸು ಬದಲಿಸಿರುವ ಅಕ್ಷಯ್ ಅವರು, ಅಭಿಮಾನಿಗಳಲ್ಲಿ ಕ್ಷಮೆ ಕೇಳಿ, ಬಹಿರಂಗವಾಗಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಉತ್ತರಾಖಂಡ ರಾಯಭಾರಿ
ನನ್ನನ್ನು ಕ್ಷಮಿಸಿ.. ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆ ಕೇಳುತ್ತೇನೆ. ಕಳೆದ ಕೆಲವು ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆಗಳು ನನ್ನಲ್ಲಿ ಆಳವಾದ ಪರಿಣಾಮ ಬೀರಿವೆ. ನಾನು ತಂಬಾಕು ಸೇವನೆಯನ್ನು ಉತ್ತೇಜಿಸುವುದಿಲ್ಲ. ವಿಮಲ್ ಜೊತೆ ನಾನು ಕೈ ಜೋಡಿಸಿರುವುದರ ಕುರಿತು ನಿಮ್ಮ ಪ್ರತಿಕ್ರಿಯೆಗಳನ್ನು ನಾನು ಗೌರವಿಸುತ್ತೇನೆ. ಮಾನವೀಯತೆಯ ಕಾರಣಕ್ಕೆ ನಾನು ಈ ಜಾಹೀರಾತಿನಿಂದ ಹಿಂದೆ ಸರಿಯುತ್ತೇನೆ. ಒಳ್ಳೆಯ ಉದ್ದೇಶಕ್ಕೆ ಇದರ ಸಂಭಾವನೆಯನ್ನು ನೀಡಲು ನಿರ್ಧರಿಸಿದ್ದೇನೆ. ಈಗಾಗಲೇ ಮಾಡಿಕೊಂಡ ಒಪ್ಪಂದದ ಅವಧಿ ಮುಗಿಯುವವರೆಗೂ ಬ್ರ್ಯಾಂಡ್ನವರು ಆ ಜಾಹೀರಾತನ್ನು ಪ್ರಸಾರ ಮಾಡಬಹುದು. ಆದರೆ ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ. ಸದಾ ನಿಮ್ಮ ಪ್ರೀತಿ ಮತ್ತು ಹಾರೈಕೆ ಬಯಸುತ್ತೇನೆ’ ಎಂದು ಹೇಳಿದ್ದಾರೆ.
pic.twitter.com/rBMZqGDdUI
— Akshay Kumar (@akshaykumar) April 20, 2022