'ನಾನು ಬಲಿಷ್ಠ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ': ಇಡಿ ಚಾರ್ಜ್ ಶೀಟ್ ಗೆ ನಟಿ ಜಾಕ್ವೆಲಿನ್ ಪ್ರತಿಕ್ರಿಯೆ

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ...
ನಟಿ ಜಾಕ್ವೆಲಿನ್ ಫರ್ನಾಂಡಿಸ್
ನಟಿ ಜಾಕ್ವೆಲಿನ್ ಫರ್ನಾಂಡಿಸ್

ಮುಂಬೈ: ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿರುವ ನಟಿ, ಇದು ನನಗೆ ಪರೀಕ್ಷೆಯ ಸಮಯವಾಗಿದ್ದು, ಮತ್ತಷ್ಟು ಬಲಿಷ್ಠವಾಗುವುದಾಗಿ ಹೇಳಿದ್ದಾರೆ.

ಡಿಯರ್ ಮಿ ಎಂದು ಪೋಸ್ಟ್ ಆರಂಭಿಸಿರುವ ಜಾಕ್ವೆಲಿನ್, ನಾನು ಬಲಿಷ್ಠವಾಗಿದ್ದೇನೆ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗಲಿದೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆ, ಕನಸನ್ನು ನನಸಾಗಿಸುತ್ತೇನೆ, ನನಗದು ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ  ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಆರೋಪಿ ಎಂದು ಹೆಸರಿಸಲಾಗಿದೆ.

ಇದಕ್ಕೂ ಮೊದಲು ದೆಹಲಿ ಪೊಲೀಸರು ಸುಖೇಶ್ ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಅವರು ಔಷಧೀಯ ದೈತ್ಯ ರ್ಯಾನ್‌ಬಾಕ್ಸಿಯ ಮಾಜಿ ಪ್ರವರ್ತಕರ ಸದಸ್ಯರಾದ ಅದಿತಿ ಸಿಂಗ್ ಮತ್ತು ಶಿವೇಂದರ್ ಸಿಂಗ್ ಅವರಿಂದ ಸುಮಾರು  215 ಕೋಟಿ ರೂ. ಸುಲಿಗೆ ಮಾಡಿದ್ದರು. ದೆಹಲಿ ಪೊಲೀಸರ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಇಡಿ ತನ್ನ ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.

ಇಡಿ ಮೊದಲ ಚಾರ್ಜ್‌ಶೀಟ್‌ನಲ್ಲಿ ಚಂದ್ರಶೇಖರ್ ವಂಚಿಸಿದ ಹಣವನ್ನು ಹೇಗೆ ಬಳಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ತನ್ನ ಪೂರಕ ಆರೋಪಪಟ್ಟಿಯಲ್ಲಿ, ಚಂದ್ರಶೇಖರ್ ಅವರು ವಂಚಿಸಿದ ಮೊತ್ತದಿಂದ  5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್ ಫರ್ನಾಂಡೀಸ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಪರಾಧದ ಆದಾಯದಿಂದ ಉಡುಗೊರೆಗಳನ್ನು ಖರೀದಿಸಲಾಗಿದೆ ಎಂದು ಆಕೆಗೆ ತಿಳಿದಿತ್ತು ಎಂದು ಆರೋಪಿಸಿ ನಟಿಯನ್ನು ಆರೋಪಿ ಎಂದು ಹೆಸರಿಸಿದೆ.

ಸುಖೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಲಿಗೆ ಸೇರಿದಂತೆ ಅಪರಾಧ ಚಟುವಟಿಕೆಗಳಿಂದ ಗಳಿಸಿದ ಆದಾಯದಿಂದ  5.71 ಕೋಟಿ ರೂ. ಮೌಲ್ಯದ ವಿವಿಧ ಉಡುಗೊರೆಗಳನ್ನು ನೀಡಿದ್ದರು. ಚಂದ್ರಶೇಖರ್ ಅವರು ತಮ್ಮ ದೀರ್ಘಕಾಲದ ಸಹವರ್ತಿ ಮತ್ತು ಸಹ ಆರೋಪಿ ಪಿಂಕಿ ಇರಾನಿ ಅವಿಂದ ಈ ಉಡುಗೊರೆಯನ್ನು ತಲುಪಿಸಿದ್ದರು ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com