'ಬಿಗ್ ಬಿ' ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ.
Published: 24th August 2022 09:24 AM | Last Updated: 24th August 2022 09:24 AM | A+A A-

ಅಮಿತಾಬ್ ಬಚ್ಚನ್(ಸಂಗ್ರಹ ಚಿತ್ರ)
ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ.
T 4388 - I have just tested CoViD + positive .. all those that have been in my vicinity and around me, please get yourself checked and tested also ..
— Amitabh Bachchan (@SrBachchan) August 23, 2022
ಕೊರೋನಾ ಮೊದಲನೇ ಅಲೆ ಬಂದ ಸಂದರ್ಭದಲ್ಲಿ ಜುಲೈ 2020ರಲ್ಲಿ ಅಮಿತಾಬ್ ಬಚ್ಚನ್ , ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.
ಅಮಿತಾಬ್ ಬಚ್ಚನ್ ಅವರು ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ ಪತಿ ಸರಣಿ 14ರ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.