ಸುಕೇಶ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ವಿಚಾರಣೆಗೆ ನಟಿ ನೋರಾ ಫತೇಹಿ ಹಾಜರು
200 ಕೋಟಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು...
Published: 02nd December 2022 03:11 PM | Last Updated: 02nd December 2022 04:09 PM | A+A A-

ನೋರಾ ಫತೇಹಿ
ನವದೆಹಲಿ: 200 ಕೋಟಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
30 ವರ್ಷದ ನೋರಾ ಫತೇಹಿ ಅವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿದ್ದು, ಇಂದು ಸಹ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಇದನ್ನು ಓದಿ: 200 ಕೋಟಿ ಸುಲಿಗೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ 30 ಪ್ರಶ್ನೆ ಕೇಳಿದ ದೆಹಲಿ ಪೊಲೀಸರು
ಚಂದ್ರಶೇಖರ್ ಅವರೊಂದಿಗಿನ ನಂಟಿನ ಬಗ್ಗೆ ಬಾಲಿವುಡ್ ನಟಿಯನ್ನು ವಿಚಾರಣೆ ನಡೆಸಲಾಗುವುದು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯ ಸೆಕ್ಷನ್‌ಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನ್ನ ಹಿಂದಿನ ಚಾರ್ಜ್ ಶೀಟ್‌ಗಳಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಿದ್ದು, ಫತೇಹಿ ಅವರ ಹೇಳಿಕೆಯನ್ನು ಅದೇ ಪ್ರಾಸಿಕ್ಯೂಷನ್ ದೂರಿನಲ್ಲಿ ಸೇರಿಸಲಾಗಿದೆ.
2021ರಲ್ಲಿ ಸುಕೇಶ್ ಚಂದ್ರಶೇಖರ್ ಅವರಿಂದ ನೋರಾ ಫತೇಹಿ ಅವರ ಸೋದರ ಮಾವ ಬಿಎಂಡಬ್ಲ್ಯು ಕಾರು ಪಡೆದಿದ್ದರು ಎಂದು ಈ ಹಿಂದೆ ವಿಶೇಷ ಪೊಲೀಸ್ ಆಯುಕ್ತ ರವೀಂದರ್ ಯಾದವ್ ಅವರು ಹೇಳಿದ್ದರು.