ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪದ ಮೇಲೆ ಸಹನಟನ ಬಂಧನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 27 ವರ್ಷದ ಸಹ ನಟನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತುನಿಷಾ ಶರ್ಮಾ
ತುನಿಷಾ ಶರ್ಮಾ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 27 ವರ್ಷದ ಸಹ ನಟನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

21 ವರ್ಷದ ನಟಿ ಶನಿವಾರ ಇಲ್ಲಿನ ವಸೈ ಪ್ರದೇಶದಲ್ಲಿ ಧಾರಾವಾಹಿಯೊಂದರ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಶರ್ಮಾ ಅವರ ತಾಯಿ ನೀಡಿದ ದೂರಿನ ಆದಾರದ ಮೇರೆಗೆ ಇಲ್ಲಿನ ವಲಿವ್ ಪೊಲೀಸರು ಸಂತ್ರಸ್ತೆಯ ಸಹನಟ ಶ್ರೀಜನ್ ಎಂ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುನಿಷಾ ಶರ್ಮಾ ಅವರು 'ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್' ಟವಿ ಶೋ ಮತ್ತು 'ಫಿತೂರ್' ಮತ್ತು 'ಬಾರ್ ಬಾರ್ ದೇಶೋ' ಚಿತ್ರಗಳಲ್ಲಿ ನಟಿಸಿದ್ದರು.

‘ಅಲಿ ಬಾಬಾ: ದಸ್ತಾನ್-ಎ-ಕಾಬೂಲ್’ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿರುವ ಸೆಟ್‌ನಲ್ಲಿ ಶನಿವಾರ ಈ ಘಟನೆ ನಡೆದಿದೆ. ತುನಿಷಾ ಅವರು ಸೆಟ್‌ನಲ್ಲಿ ವಾಶ್‌ರೂಂಗೆ ತೆರಳಿದ್ದು, ಬಹಳ ಹೊತ್ತಾದರೂ ಹಿಂದಿರುಗಿರಲಿಲ್ಲ. ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಆಕೆಯ ತಾಯಿ ನೀಡಿರುವ ದೂರಿನಲ್ಲಿ, ತುನಿಷಾ ಶರ್ಮಾ ಮತ್ತು ಖಾನ್ ಪ್ರೀತಿಸುತ್ತಿದ್ದರು. ತನ್ನ ಮಗಳ ಸಾವಿಗೆ ಖಾನ್ ಕಾರಣ ಎಂದು ದೂಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com