ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಬಾಲಿವುಡ್ ಸ್ಟಾರ್ ದಂಪತಿಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವುದಾಗಿ  ಪೊಲೀಸರು ತಿಳಿಸಿದ್ದಾರೆ.
ಕತ್ರಿನಾ ಕೈಫ್, ವಿಕ್ಕಿ ಕೌಶಲ್
ಕತ್ರಿನಾ ಕೈಫ್, ವಿಕ್ಕಿ ಕೌಶಲ್

ಮುಂಬೈ: ಬಾಲಿವುಡ್ ಸ್ಟಾರ್ ದಂಪತಿಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇವರಿಬ್ಬರಿಗೂ ಇನ್ಸ್ಟಾಗ್ರಾಮ್ ನಲ್ಲಿ ಬೆದರಿಕೆಗಳು ಬರುತ್ತಿವೆ. ಆರೋಪಿಗಳು ಕತ್ರಿನಾ ಕೈಫ್ ಅವರನ್ನು ಹಿಂಬಾಲಿಸಿ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತ ದಂಡ ಸಂಹಿತೆಯ ಸೆಕ್ಷನ್ 506-11 (ಕ್ರಿಮಿನಲ್ ಬೆದರಿಕೆ) 354-ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಇದುವರೆಗೂ ಯಾರನ್ನು ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com