ಸೂಪರ್ ವುಮನ್ ಗೆಟಪ್ ನಲ್ಲಿ ಶಿಲ್ಪಾ ಶೆಟ್ಟಿ; ಮತ್ತೆ ಸೋಷಿಯಲ್ ಮೀಡಿಯಾಕ್ಕೆ ಮರಳಿದ 'ನಿಕಮ್ಮಾ'
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮಕ್ಕೆ ಪುನರಾಗಮನ ಮಾಡಿದ್ದಾರೆ. ಅಲ್ಲದೆ, ಮುಂಬರುವ ಅವರ ಚಿತ್ರ ನಿಕಮ್ಮಾದ ಫಸ್ಟ್ ಲುಕ್ ಅನ್ನು ಹಂಚಿಕೊಳ್ಳುವ ಮೂಲಕ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.
Published: 16th May 2022 04:59 PM | Last Updated: 17th May 2022 01:07 PM | A+A A-

ಶಿಲ್ಪಾ ಶೆಟ್ಟಿ
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮಕ್ಕೆ ಪುನರಾಗಮನ ಮಾಡಿದ್ದಾರೆ. ಅಲ್ಲದೆ, ಮುಂಬರುವ ಅವರ ಚಿತ್ರ ನಿಕಮ್ಮಾದ ಫಸ್ಟ್ ಲುಕ್ ಅನ್ನು ಹಂಚಿಕೊಳ್ಳುವ ಮೂಲಕ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಿಂದ ದೂರವಿದ್ದ ಶಿಲ್ಪಾ ಶೆಟ್ಟಿ, ಸೋಷಿಯಲ್ ಮೀಡಿಯಾಕ್ಕೆ ವಿದಾಯ ಹೇಳುತ್ತಿರುವುದಾಗಿ ಇನ್ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದರು. “ಏಕತಾನತೆಯಿಂದ ಬೇಜಾರಾಗಿದೆ. ಇಲ್ಲಿ ಎಲ್ಲವೂ ಒಂದೇ ರೀತಿ ಕಾಣುತ್ತದೆ. ಇದರಿಂದಾಗಿ ಈ ವೇದಿಕೆಯಿಂದ ದೂರ ಸರಿಯುತ್ತಿರುವುದಾಗಿಯೂ ಹಾಗೂ ಹೊಸ ಅವತಾರವನ್ನು ಪಡೆಯುವವರೆಗೆ ಮತ್ತೆ ಹಿಂತಿರುಗುವುದಿಲ್ಲ ಎಂದು ಹೇಳಿದ್ದರು. ಈಗ ಹೊಸ ಅವತಾರದೊಂದಿಗೆ ಮತ್ತೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಇನ್ಸ್ಟಾಗ್ರಾಮ್ಗೆ ಮರಳಿದ್ದಾರೆ.
ಇದನ್ನು ಓದಿ: ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾ
ತಮ್ಮ ಮುಂಬರುವ ಚಿತ್ರ ‘ನಿಕಮ್ಮಾ’ ಟೀಸರ್ ಅನ್ನು ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಶಿಲ್ಪಾ ಸೂಪರ್ ವುಮನ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಹೆಸರು ಅವ್ನಿ ಎಂದು ಹೇಳಿದ್ದಾರೆ.
ಶಬ್ಬೀರ್ ಖಾನ್ ನಿರ್ದೇಶನದ ಈ ಚಿತ್ರದಲ್ಲಿ ಶಿಲ್ಪಾ ಶೆಟ್ಟಿಯಲ್ಲದೆ, ಅಭಿಮನ್ಯು ದಸ್ಸಾನಿ ಮತ್ತು ಶೆರ್ಲಿ ಸೆಟಿಯಾ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಳೆ ಅಂದರೆ ಮೇ 17ರಂದು ನಿಕಮ್ಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.