ಸಲ್ಮಾನ್ ಖಾನ್ ಡೆಂಗ್ಯೂನಿಂದ ಚೇತರಿಕೆ, ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗಿ

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ಡೆಂಗ್ಯೂನಿಂದ ಚೇತರಿಸಿಕೊಂಡಿದ್ದು, ಜನಪ್ರಿಯ ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 16ರ ಸಂಚಿಕೆಗಾಗಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ಡೆಂಗ್ಯೂನಿಂದ ಚೇತರಿಸಿಕೊಂಡಿದ್ದು, ಜನಪ್ರಿಯ ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 16ರ ಸಂಚಿಕೆಗಾಗಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

2010ರಿಂದಲೂ ಬಿಗ್ ಬಾಸ್ ಹೋಸ್ಟ್ ಮಾಡುತ್ತಿರುವ 56 ವರ್ಷದ ಸಲ್ಮಾನ್ ಖಾನ್ ಅವರಿಗೆ ಕಳೆದ ವಾರ ಡೆಂಗ್ಯೂ ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಕಲರ್ ಚಾನೆಲ್ ಶೋನ 'ವೀಕೆಂಡ್ ಕಾ ವಾರ್ 'ಎಪಿಸೋಡ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಸಲ್ಮಾನ್ ಖಾನ್ ಇದೀಗ ಸ್ವಲ್ಪ ಬಳಲಿದ್ದರೂ ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ  ತಿಳಿಸಿವೆ.

ಸಲ್ಮಾನ್ ಖಾನ್ ಅವರು ಗುರುವಾರ ವೀಕೆಂಡ್ ಎಪಿಸೋಡ್ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಮತ್ತು ಶನಿವಾರದ ಎಪಿಸೋಡ್ ಗಾಗಿ ಇಂದು ಮಧ್ಯಾಹ್ನ ಚಿತ್ರೀಕರಣದಲ್ಲಿ ಸಲ್ಮಾನ್ ಖಾನ್ ತೊಡಗಿಸಿಕೊಳ್ಳಲಿದ್ದಾರೆ ಎಂದು ಕಾರ್ಯಕ್ರಮ ತಂಡ ಮಾಹಿತಿ ನೀಡಿದೆ. 

ಫೋನ್ ಭೂತ್ ಚಿತ್ರದ ಪ್ರಚಾರಕ್ಕಾಗಿ ನಟಿ ಕತ್ರಿನಾ ಕೈಫ್, ಇಶಾನ್, ಸಿದ್ದಾಂತ್ ಚತುರ್ವೇದಿ ಮತ್ತಿತರರು ಇಂದು ಸೆಟ್ ಗೆ ಆಗಮಿಸಲಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿವೆ. ಸಲ್ಮಾನ್ ಖಾನ್ ಉಪಸ್ಥಿತಿಯಲ್ಲಿ ಬಿಗ್ ಬಾಸ್ 16ರ ಮೂರು ಎಪಿಸೋಡ್ ಗಳನ್ನು ಕರಣ್ ಜೋಹರ್ ಹೋಸ್ಟ್ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com