ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ: ಶಾರೂಕ್ ಖಾನ್ ಗೆ ಗಾಯ, ಶಸ್ತ್ರ ಚಿಕಿತ್ಸೆ

ಅಮೆರಿಕದಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಸಣ್ಣ ಅಪಘಾತವಾಗಿದೆ. ಲಾಸ್ ಏಂಜಲೀಸ್ ನಲ್ಲಿ ಇನ್ನೂ ಹೆಸರಿಡದ ಚಿತ್ರದ ಶೂಟಿಂಗ್ ನಲ್ಲಿದ್ದ ಶಾರೂಕ್ ಖಾನ್ ಅವರ ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ.
ಶಾರೂಖ್ ಖಾನ್
ಶಾರೂಖ್ ಖಾನ್
Updated on

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ.

ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆತಂಕಪಡುವ ಅಗತ್ಯವಿಲ್ಲ, ರಕ್ತಸ್ರಾವ ನಿಲ್ಲಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಸೂಪರ್ ಸ್ಟಾರ್ ಈಗ ತಮ್ಮ ಮುಂಬೈ ಮನೆಗೆ ಮರಳಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಕಳೆದ ತಿಂಗಳು ಹಿಂದಿ ಚಲನಚಿತ್ರೋದ್ಯಮದಲ್ಲಿ 31 ವರ್ಷಗಳನ್ನು ಪೂರೈಸಿದ ಶಾರೂಕ್ ಖಾನ್ ಅವರ ಪಠಾಣ್ ಚಿತ್ರ ಬ್ಲಾಕ್‌ಬಸ್ಟರ್ ಆಗುವ ಮೂಲಕ ಹಲವು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶೀಘ್ರದಲ್ಲೇ 'ಜವಾನ್' ಮತ್ತು 'ಡಂಕಿ'ಯಲ್ಲಿ ಅವರು  ಕಾಣಿಸಿಕೊಳ್ಳಲಿದ್ದಾರೆ. ಅಟ್ಲಿ ನಿರ್ದೇಶನದ 'ಜವಾನ್' ಸೆಪ್ಟೆಂಬರ್ 7 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ನಯನತಾರಾ ಕೂಡ ನಟಿಸಿದ್ದಾರೆ.

ನಟ ಸಲ್ಮಾನ್ ಖಾನ್ ಅವರ ಟೈಗರ್ 3 ನಲ್ಲಿ ಅತಿಥಿ ಪಾತ್ರದಲ್ಲಿ ಶಾರೂಖ್ ಕಾಣಿಸಿಕೊಳ್ಳಲಿದ್ದಾರೆ, ನಂತರ ಅವರು ರಾಜ್‌ಕುಮಾರ್ ಹಿರಾನಿ ಅವರ 'ಡುಂಕಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. 'ಇದನ್ನು ಡಿಸೆಂಬರ್ 2023 ರಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com