ಕಂಗನಾ ಅಭಿನಯದ ಬಹುನಿರೀಕ್ಷಿತ 'ಎಮರ್ಜೆನ್ಸಿ' ರಿಲೀಸ್ ಡೇಟ್ ಫಿಕ್ಸ್, ಟೀಸರ್ ಔಟ್

ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಎಮರ್ಜೆನ್ಸಿ' ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುವ ಈ ಸಿನಿಮಾ ಇದೇ ವರ್ಷದ ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಎಮರ್ಜೆನ್ಸಿಯಲ್ಲಿ ಕಂಗನಾ
ಎಮರ್ಜೆನ್ಸಿಯಲ್ಲಿ ಕಂಗನಾ
Updated on: 

ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಎಮರ್ಜೆನ್ಸಿ' ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುವ ಈ ಸಿನಿಮಾ ಇದೇ ವರ್ಷದ ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಿನಿಮಾದ ಟೀಸರ್ ನ್ನು ಟ್ವೀಟರ್ ನಲ್ಲಿ ಕಂಗನಾ ಹಂಚಿಕೊಂಡಿದ್ದಾರೆ. ಇಂದಿರಾಗಾಂಧಿ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ 48 ವರ್ಷಗಳ ನಂತರ ಅದೇ ದಿನದಂದು ಈ ಚಿತ್ರ ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. 

ತುರ್ತು ಪರಿಸ್ಥಿತಿಯು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಇದೊಂದು ನಿರ್ಣಾಯಕ ಕಥೆಯಾಗಿದ್ದು,  ಸಿನಿಮಾ ಆರಂಭಿಸಿದ್ದಕ್ಕಾಗಿ  ಪ್ರತಿಭಾವಂತ ನಟರಾದ ದಿವಂಗತ ಸತೀಶ್ ಜಿ, ಅನುಪಮ್ ಜಿ, ಶ್ರೇಯಸ್, ಮಹಿಮಾ ಮತ್ತು ಮಿಲಿಂದ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಭಾರತದ ಇತಿಹಾಸದಿಂದ ಈ ಅಸಾಧಾರಣ ಸಂಚಿಕೆಯನ್ನು ದೊಡ್ಡ ಪರದೆಯ ಮೇಲೆ ತರಲು  ಉತ್ಸುಕಳಾಗಿದ್ದೇನೆ ಜೈ ಹಿಂದ್ ಎಂದು ಕಂಗನಾ ಬರೆದುಕೊಂಡಿದ್ದಾರೆ. 

ಕಂಗನಾ ಅಲ್ಲದೆ,  ಅನುಪಮ್ ಖೇರ್, ಮಹಿಮಾ ಚೌಧರಿ, ವಿಶಾಕ್ ನಾಯರ್ ಮತ್ತು ಶ್ರೇಯಸ್ ತಲ್ಪಾಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬಾಹುಬಲಿ ಬರಹಗಾರ ವಿಜಯೇಂದ್ರ ಪ್ರಸಾದ್ ಅವರು ‘ತುರ್ತು ಪರಿಸ್ಥಿತಿ’ ನೋಡಿ ಭಾವುಕರಾದರು ಎಂದು ಕಂಗನಾ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com