ಶೂಟಿಂಗ್ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್'ಗೆ ಗಾಯ
ಹೈದರಾಬಾದ್: ಪ್ರಾಜೆಕ್ಟ್ ಕೆ ಚಿತ್ರೀಕರಣದ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಗಾಯಗೊಂಡಿರುವ ಅಮಿತಾಭ್ ಬಚ್ಚನ್ ಅವರಿಗೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ಸಲಹೆಯಂತೆ ಸಿಟಿ ಸ್ಕ್ಯಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಮಿತಾಭ್ ಬಚ್ಚನ್ ಅವರ ಪಕ್ಕೆಲುಬಿನಲ್ಲಿ ಮುರಿತ ಕಂಡು ಬಂದಿದ್ದು, ಇದೀಗ ಮುಂಬೈ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್ ಅವರು, ‘ಹೈದರಾಬಾದ್‌ನಲ್ಲಿ ಪ್ರಾಜೆಕ್ಟ್ ‘ಕೆ’ ಚಿತ್ರೀಕರಣದಲ್ಲಿ, ಆಕ್ಷನ್ ದೃಶ್ಯ ಚಿತ್ರಿಸುವ ಸಮಯದಲ್ಲಿ, ನನಗೆ ಗಾಯವಾಗಿದೆ. ಪಕ್ಕೆಲುಬು ಮುರಿದಿದೆ. ಹೈದರಾಬಾದ್‌ನ ಎಐಜೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿಕೊಂಡು ಮನೆಗೆ ಮರಳಿರುವೆ. ನೋವಾಗುತ್ತಿದೆ. ಅಗತ್ಯ ಚಿಕಿತ್ಸೆ ನೀಡಲಾಗಿದೆ. ಚೇತರಿಕೆಗೆ ಕೆಲ ದಿನಗಳು ಬೇಕು. ವಿಶ್ರಾಂತಿ ಅಗತ್ಯವಿದೆ’ ಎಂದು ಹೇಳಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅಮಿತಾಭ್ ಎರಡು ಬಾರಿ ಕೋವಿಡ್‌ಗೆ ಸೋಂಕಿಗೊಳಗಾಗಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಬ್ ಬಚ್ಚನ್ ಅವರು ಈ ಹಿಂದೆ ಹೇಳಿಕೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ