ಮುಂಬೈ: ಇಮೇಲ್ ಮೂಲಕ ಬೆದರಿಕೆ, ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಬಿಗಿ ಭದ್ರತೆ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಇಮೇಲ್ ಮೂಲಕ ಬೆದರಿಕೆ ಬಂದ ನಂತರ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗಡೆ ಬಿಗಿ ಭದ್ರತೆಯನ್ನು ಪೊಲೀಸರು ಒದಗಿಸಿದ್ದಾರೆ. ಬೆದರಿಕೆ ಸಂಬಂಧ ಐಪಿಸಿ ಸೆಕ್ಷನ್ 506 (2) 120 (ಬಿ) ಮತ್ತು 34ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ನಟ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್
Updated on

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಇಮೇಲ್ ಮೂಲಕ ಬೆದರಿಕೆ ಬಂದ ನಂತರ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗಡೆ ಬಿಗಿ ಭದ್ರತೆಯನ್ನು ಪೊಲೀಸರು ಒದಗಿಸಿದ್ದಾರೆ. ಬೆದರಿಕೆ ಸಂಬಂಧ ಐಪಿಸಿ ಸೆಕ್ಷನ್ 506 (2) 120 (ಬಿ) ಮತ್ತು 34ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ನಟ ಸಲ್ಮಾನ್ ಖಾನ್ ಅವರ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಜೈಲಿನಲ್ಲಿರುವ ದರೋಡೆಕೋರರಾದ ​​ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ರೋಹಿತ್ ಗಾರ್ಗ್ ವಿರುದ್ಧ ಮುಂಬೈ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು.

ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಜೀವನದ ದೊಡ್ಡ ಗುರಿ ಎಂದು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾನೆ.  ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣ ಮೃಗವನ್ನು ಭೇಟಿಯಾಡಿದ್ದ ಸಲ್ಮಾನ್ ಖಾನ್ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಆತನನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com