ಶಾರುಖ್ ಖಾನ್ ನಟನೆಯ ಬ್ಲಾಕ್ ಬಸ್ಟರ್ 'ಜವಾನ್' ಚಿತ್ರದ ಒಟಿಟಿ ಬಿಡುಗಡೆ ಡೇಟ್ ಫಿಕ್ಸ್!

ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಅಟ್ಲಿ ನಿರ್ದೇಶನದ ಜವಾನ್ ಸಿನಿ ಪ್ರೇಕ್ಷಕರಲ್ಲಿ ಸಕತ್ ಕ್ರೇಜ್ ಹುಟ್ಟುಹಾಕಿತ್ತು. ಸಿನಿಮಾ ಥಿಯೇಟರ್‌ಗಳಲ್ಲಿ ಇರುವಾಗಲೇ ಜನರು ಅದರ ಒಟಿಟಿ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಅವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.
ಜವಾನ್ ಸಿನಿಮಾ ಸ್ಟಿಲ್
ಜವಾನ್ ಸಿನಿಮಾ ಸ್ಟಿಲ್

ಈ ವರ್ಷ ಪಠಾಣ್ ಮತ್ತು ಜವಾನ್ ಸಿನಿಮಾಗಳ ಜೊತೆಗೆ ಎರಡು ಬ್ಯಾಕ್-ಟು-ಬ್ಯಾಕ್ ಹಿಟ್‌ಗಳನ್ನು ನೀಡಿರುವ ನಟ ಶಾರುಖ್ ಖಾನ್ ಮತ್ತೊಮ್ಮೆ ತಾವು ಬಾಲಿವುಡ್ ಬಾದ್‌ಷಾ ಎಂಬುದನ್ನು ನಿರೂಪಿಸಿದ್ದಾರೆ. ಜವಾನ್ ಬಿಡುಗಡೆಯಾಗಿ ಆರನೇ ವಾರಕ್ಕೆ ಕಾಲಿಟ್ಟಿದೆ ಮತ್ತು ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಅಟ್ಲಿ ನಿರ್ದೇಶನದ ಜವಾನ್ ಸಿನಿ ಪ್ರೇಕ್ಷಕರಲ್ಲಿ ಸಕತ್ ಕ್ರೇಜ್ ಹುಟ್ಟುಹಾಕಿತ್ತು. ಸಿನಿಮಾ ಥಿಯೇಟರ್‌ಗಳಲ್ಲಿ ಇರುವಾಗಲೇ ಜನರು ಅದರ ಒಟಿಟಿ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಅವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.

ಈ ಚಿತ್ರ ಯಾವ ಒಟಿಟಿಗೆ ಹಾಗೂ ಯಾವಾಗ ಬರುತ್ತೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಇದೇ ನವೆಂಬರ್ 2 ರಂದು ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಜವಾನ್ ಚಿತ್ರ ಬರಲಿದೆ. ಅಂದೇ ಶಾರುಕ್ ಖಾನ್ ಅವರ 58 ನೇ ಜನ್ಮ ದಿನವಿರುವುದು ವಿಶೇಷ. ಸ್ಯಾಟಲೈಟ್, ಸಂಗೀತದ ಹಕ್ಕು ಸೇರಿದಂತೆ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು 250 ಕೋಟಿ ರೂಪಾಯಿಗೆ ನೆಟ್‌ಫ್ಲಿಕ್ಸ್ ಖರೀದಿಸಿದೆ.

ಜವಾನ್ ಚಿತ್ರ ಬಿಡುಗಡೆಯಾಗಿ ಇಲ್ಲಿವರೆಗೆ ಬಾಕ್ಸ್ ಆಫೀಸ್ ಗಳಿಕೆ 1,150 ಕೋಟಿಗೂ ಅಧಿಕ ಎನ್ನಲಾಗಿದೆ. ಈ ಮೂಲಕ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಶಾರುಖ್ ಚಿತ್ರ ಹೊಸ ದಾಖಲೆ ಬರೆದಿದೆ.

ಪಠಾಣ್ ನಂತರ ಸಾವಿರ ಕೋಟಿ ಕ್ಲಬ್ ಸೇರಿದ ಚಿತ್ರ ಇದಾಗಿದೆ. ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಚಿತ್ರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com