ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ
ಬಾಲಿವುಡ್
ಫೆಬ್ರವರಿ 6ರಂದು ರಾಜಸ್ತಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಸಿದ್ಧಾರ್ಥ್- ಕಿಯಾರಾ ಅಡ್ವಾಣಿ ಮದುವೆ
ಬಾಲಿವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಮುಂಬೈ: ಬಾಲಿವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಐಷಾರಾಮಿ ಸೂರ್ಯಘರ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಈ ಜೋಡಿ ಮದುವೆಯಾಗಲಿದ್ದಾರೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಭಾಗಿಯಾಗಲಿದ್ದು, ಫೆಬ್ರುವರಿ 4 ರಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಲಿವೆ.
ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು ಅವರ ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ. ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಕೊನೆಗೂ ಮದುವೆಯಾಗುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ