ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ: ಮೈಸೂರಿನಲ್ಲಿ ಇರಾನಿ ಮಹಿಳೆಯಿಂದ ದೂರು ದಾಖಲು
ನಟಿ ರಾಖಿ ಸಾವಂತ್ ಅವರ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನಿ ಮೂಲದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಈ ಸಂಬಂಧ ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ.
Published: 12th February 2023 01:39 PM | Last Updated: 13th February 2023 05:10 PM | A+A A-

ಸಂಗ್ರಹ ಚಿತ್ರ
ಮುಂಬೈ: ನಟಿ ರಾಖಿ ಸಾವಂತ್ ಅವರ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನಿ ಮೂಲದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಈ ಸಂಬಂಧ ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ನಟಿ ರಾಖಿ ಸಾವಂತ್ ಅವರು, ಆದಿಲ್ ಖಾನ್ ವಿರುದ್ಧ ವಂಚನೆ ಹಾಗೂ ಹಲ್ಲೆಗೆ ಯತ್ನಿಸಿದ ಆರೋಪವನ್ನು ಮಾಡಿದ್ದರು. ಈ ಸಂಬಂಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಬಳಿಕ ಅನೇಕ ಬಾರಿ ಆದಿಲ್ ವಿರುದ್ಧ ರಾಖಿ ಅವರು ಆರೋಪಗಳನ್ನು ಮಾಡಿದ್ದಾರೆ.
ರಾಖಿಯ ಆರೋಪಗಳಿಂದ ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ಮೈಸೂರಿನಲ್ಲಿ ಇರಾನಿ ಮೂಲದ ಮಹಿಳೆಯೊಬ್ಬರು ತಮ್ಮ ಮೇಲೆ ಆದಿಲ್ ಅತ್ಯಾಚಾರ ಮಾಡಿದ್ದಾರೆಂದು ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರಿನಲ್ಲಿ ಒಟ್ಟಿಗೆ ವಾಸಿಸುತ್ತಿದ್ದಾಗ ಮದುವೆಯ ನೆಪದಲ್ಲಿ ಆದಿಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಮಹಿಳೆ ಆರೋಪಿಸಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ: ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ಬಂಧನ!
ಐದು ತಿಂಗಳ ಹಿಂದೆ ನನ್ನನ್ನು ಮದುವೆಯಾಗುವಂತೆ ಬೇಡಿಕೆ ಇಟ್ಟಾಗ ಅದನ್ನು ತಿರಸ್ಕರಿಸಿದ್ದ. ಅನೇಕ ಹುಡುಗಿಯರೊಂದಿಗೆ ಇದೇ ರೀತಿ ಮಾಡಿದ್ದೇನೆ. ನನ್ನ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ದೂರು ನೀಡದಂತೆ ಬ್ಲ್ಯಾಕ್ ಮೇಲ್ ಮಾಡಿದ್ದ ಎಂದು ಹೇಳಿಕೊಂಡಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪೊಲೀಸರು ಆದಿಲ್ ವಿರುದ್ಧ ಐಪಿಸಿ ಸೆಕ್ಷನ್ 376, 417,420, 504 ಮತ್ತು 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.