ಕುದುರೆ ಓಡಿಸುವಾಗ ತಲೆ ಸುತ್ತಿ ಬಿದ್ದ ನಟ ರಣದೀಪ್ ಹೂಡಾ: ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ

ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ರಣದೀಪ್ ಹೂಡಾ
ರಣದೀಪ್ ಹೂಡಾ

ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಸದ್ಯ ರಣದೀಪ್ ಅವರಿಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಟ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಕೆಲವು ವಾರಗಳ ಕಾಲ ಬೆಸ್ಟ್‌ ರೆಸ್ಟ್‌ ತೆಗೆದುಕೊಳ್ಳಬೇಕಂತೆ. ರಣದೀಪ್ ಫೋಟೋ ಅಥವಾ ವಿಡಿಯೋ ಎಲ್ಲಿಯೂ ರಿವೀಲ್ ಅಗಿಲ್ಲ

2001ರಲ್ಲಿ ಮಾನ್ಸೂನ್ ವೆಡ್ಡಿಂಗ್ ಸಿನಿಮಾ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 32 ಸಿನಿಮಾಗಳಲ್ಲಿ ಅಭಿನಯಿಸಿರುವ ರಣದೀಪ್ ಸಾವರ್ಕರ್ ಪಾತ್ರಕ್ಕಾಗಿ ಕೆಲವು ದಿನಗಳ ಹಿಂದೆ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಕಳೆದ ವರ್ಷ ಸಲ್ಮಾನ್ ಖಾನ್ ರಾಧೆ ಸಿನಿಮಾ ಚಿತ್ರೀಕರಣ ಸಮಯದಲ್ಲಿ ರಣದೀಪ್ ಬಿದ್ದು ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ದೊಡ್ಡ ಆಪರೇಷನ್‌ ನಂತರ ಚಿತ್ರೀಕರಣಕ್ಕೆ ಮರುಳಿದ್ದರು. ಆಗ ಕಾಲಿನ ಫೋಟೋ ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಅಪ್ಡೇಟ್ ಮಾಡಿದ್ದರು.

ಈ ನೆಪದಲ್ಲಿ ಕುದುರೆ ಸವಾರಿ ಕೂಡ ಅವರು ಮಾಡುತ್ತಿದ್ದರು. ಈ ಸಮಯದಲ್ಲಿ ಕುದುರೆ ಮೇಲಿಂದ ಬಿದ್ದು ತೀವ್ರಗಾಯಗೊಂಡಿದ್ದಾರೆ. ಬಿದ್ದಿರುವ ಹೊಡೆತಕ್ಕೆ ಪ್ರಜ್ಞೆ ಕೂಡ ಕಳೆದುಕೊಂಡಿದ್ದರು. ಈ ಹಿಂದೆಯೂ ರಾಧೆ ಸಿನಿಮಾದ ಶೂಟಿಂಗ್ ವೇಳೆಯೂ ರಣದೀಪ್ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com