ಕಾಶ್ಮೀರಿ ಹಿಂದೂ ನರಮೇಧದ ದಿನದಂದು ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಮತ್ತೆ ಬಿಡುಗಡೆ!

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ  ಎಂದು ಚಿತ್ರತಂಡ ಬುಧವಾರ ಘೋಷಿಸಿದೆ.
ದಿ ಕಾಶ್ಮಿರ್ ಫೈಲ್ಸ್
ದಿ ಕಾಶ್ಮಿರ್ ಫೈಲ್ಸ್

ಮುಂಬೈ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ  ಎಂದು ಚಿತ್ರತಂಡ ಬುಧವಾರ ಘೋಷಿಸಿದೆ.

2022 ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳಲ್ಲಿ ಒಂದಾಗಿರುವ ಈ ಚಿತ್ರವು ಕಾಶ್ಮೀರಿ ಹಿಂದೂ ನರಮೇಧದ ದಿನದಂದು ಮತ್ತೆ ಬಿಡುಗಡೆಯಾಗಲಿದೆ.

'ದಿ ಕಾಶ್ಮೀರ ಫೈಲ್ಸ್ ಕಾಶ್ಮೀರಿ ಹಿಂದೂ ನರಮೇಧದ ದಿನವಾದ ಜನವರಿ 19 ರಂದು ಮತ್ತೆ ಬಿಡುಗಡೆಯಾಗುತ್ತಿದೆ. ವರ್ಷಕ್ಕೆ ಎರಡು ಬಾರಿ ಚಿತ್ರ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ನೀವು ಅದನ್ನು ಬಿಗ್ ಸ್ಕ್ರೀನ್‌ನಲ್ಲಿ ವೀಕ್ಷಿಸುವುದನ್ನು ತಪ್ಪಿಸಿಕೊಂಡಿದ್ದರೆ, ಈಗಲೇ ನಿಮ್ಮ ಟಿಕೆಟ್‌ಗಳನ್ನು ಬುಕ್ ಮಾಡಿ' ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.

ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ ಮತ್ತು ಜೀ ಸ್ಟುಡಿಯೋಸ್ ನಿರ್ಮಿಸಿದ ಈ ಚಲನಚಿತ್ರವು ಭಯೋತ್ಪಾದಕರಿಂದ ಸಮುದಾಯದ ಜನರ ಹತ್ಯೆಯ ನಂತರ ಕಾಶ್ಮೀರದಿಂದ ಕಾಶ್ಮೀರಿ ಹಿಂದೂಗಳ ವಲಸೆಯನ್ನು ಚಿತ್ರಿಸುತ್ತದೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಅವರು ಜೀ ಸ್ಟುಡಿಯೋಸ್ ಸಹಯೋಗದೊಂದಿಗೆ ನಿರ್ಮಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com