'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರು
ಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ.
Published: 23rd January 2023 11:45 PM | Last Updated: 23rd January 2023 11:53 PM | A+A A-

ನಿರ್ದೇಶಕ ರಾಜ್ ಕುಮಾರ್ ಸಂತೋಷಿ
ಮುಂಬೈ: ಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ವಿಶೇಷ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಅವರಿಗೆ ಮನವಿ ಸಲ್ಲಿಸಿರುವ ರಾಜ್ ಕುಮಾರ್ ಸಂತೋಷಿ, ಇತ್ತೀಚಿಗೆ ಗಾಂಧಿ- ಗೋಡ್ಸೆ ಸುದ್ದಿಗೋಷ್ಠಿ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರ ಗುಂಪೊಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರ 'ಗೋಡ್ಸೆ'ಸಿನಿಮಾ ಬ್ಯಾನ್ ಮಾಡಬೇಕು- ಅಸಾದುದ್ದೀನ್ ಓವೈಸಿ
ಚಿತ್ರ ಬಿಡುಗಡೆ ಮಾಡದಂತೆ, ಪ್ರಚಾರವನ್ನು ನಿಲ್ಲಿಸುವಂತೆ ಕೆಲವು ಅಪರಿಚಿತರಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದ್ದು, ಅಸುರಕ್ಷತೆಯ ಭಾವ ಕಾಡುತ್ತಿದೆ. ಅಂತಹ ವ್ಯಕ್ತಿಗಳನ್ನು ಬಿಟ್ಟರೆ ನನಗೆ ಮತ್ತು ನನ್ನ ಕುಟುಂಬ ಸದಸ್ಯರಿಗೆ ತೊಂದರೆಯನ್ನುಂಟು ಮಾಡಬಹುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಘಾಯಲ್, ದಾಮಿನಿ ಮತ್ತು ಪುಕಾರ್‌ನಂತಹ ಚಿತ್ರಗಳಿಂದ ಸಂತೋಷಿ ಹೆಸರುವಾಸಿಯಾಗಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರನ್ನು ವಿನಂತಿಸಿದ್ದಾರೆ.