ಕೆಎಲ್ ರಾಹುಲ್-ಅಥಿಯಾ ಶೆಟ್ಟಿ ಹಸೆಮಣೆ ಏರಲು ಸಜ್ಜು: ಸುನೀಲ್ ಶೆಟ್ಟಿ ಫಾರ್ಮ್‌ಹೌಸ್‌ನಲ್ಲಿ ಮದುವೆ!
ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮುಂಬೈಯಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ಸೋಮವಾರ ವಿವಾಹ ನಡೆಯಲಿದ್ದು, ತಾರಾ ಜೋಡಿಗಳು ಸತಿ ಪತಿಗಳಾಗಲಿದ್ದಾರೆ.
Published: 23rd January 2023 01:08 AM | Last Updated: 23rd January 2023 01:55 PM | A+A A-

ಅಥಿಯಾ ಶೆಟ್ಟಿ, ಕೆಎಲ್ ರಾಹುಲ್
ಮುಂಬೈ: ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮುಂಬೈಯಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ಸೋಮವಾರ ವಿವಾಹ ನಡೆಯಲಿದ್ದು, ತಾರಾ ಜೋಡಿಗಳು ಸತಿ ಪತಿಗಳಾಗಲಿದ್ದಾರೆ.
ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ಭಾನುವಾರ ಮಧ್ಯಾಹ್ನ ಅಥಿಯಾ ಶೆಟ್ಟಿ ಮೆಹಂದಿ, ಹರಿಶಿನ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ರಾತ್ರಿ ಫಾರ್ಮ್ ಹೌಸ್ ನಲ್ಲಿ ನಡೆದ ಸಂಗೀತ ಸಮಾರಂಭದ ವಿಡಿಯೋ ವೈರಲ್ ಆಗಿದೆ. ಈ ಕಾರ್ಯಕ್ರಮದಲ್ಲಿ 70 ಅತಿಥಿಗಳು ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.
ಇತ್ತೀಚಿನ ಸುದ್ದಿಗಳ ಪ್ರಕಾರ, ನಟರಾದ ಸಲ್ಮಾನ್ ಖಾನ್, ಜಾಕಿ ಶ್ರಾಫ್, ಅಕ್ಷಯ್ ಕುಮಾರ್ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಹಲವು ಬಾಲಿವುಡ್ ನಟರು, ಕ್ರಿಕೆಟ್ ಆಟಗಾರರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.