ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!
ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.
Published: 23rd January 2023 10:06 PM | Last Updated: 24th January 2023 01:43 PM | A+A A-

ಕೆಎಲ್ ರಾಹುಲ್, ಅಥಿಯಾ ಶೆಟ್ಟಿ
ಮುಂಬೈ: ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.
ಮುಂಬೈನ ಖಂಡಲಾದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮಹೌಸ್ ನಲ್ಲಿ ವಿವಾಹ ನಡೆದಿದ್ದು, ಬಾಲಿವುಡ್ ಹಾಗೂ ಕ್ರಿಕೆಟ್ ಜಗತ್ತಿನ ಹಲವು ಗಣ್ಯರು ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ
ಸರಳ ಹಾಗೂ ಸುಂದರವಾಗಿ ವಿವಾಹ ನಡೆದಿದ್ದು, ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದೆ. ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮದುವೆ ನಂತರ ಮೊದಲ ಬಾರಿಗೆ ಕ್ಯಾಮರಾಗೆ ನವ ಜೋಡಿ ಕೆ.ಎಲ್. ರಾಹುಲ್, ಅಥಿಯಾ ಶೆಟ್ಟಿ ಫೋಸ್ ನೀಡಿದ್ದಾರೆ.
#WATCH: अथिया शेट्टी और के.एल. राहुल ने सुनील शेट्टी के खंडाला फार्महाउस में शादी की। pic.twitter.com/xBiwRufqtO
— ANI_HindiNews (@AHindinews) January 23, 2023