ಹಿಂದಿ, ಮರಾಠಿ ಚಿತ್ರರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನ, ಪ್ರಧಾನಿ ಮೋದಿ ಸಂತಾಪ

 ಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ನಿಧನರಾಗಿದ್ದಾರೆ.ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು ಎಂದು ಅವರ ಮೊಮ್ಮಗ ಪರಾಗ್ ಅಜ್ಗಾವ್ಕರ್ ತಿಳಿಸಿದ್ದಾರೆ.
ಹಿರಿಯ ನಟಿ ಸುಲೋಚನಾ ಲಾತ್ಕರ್
ಹಿರಿಯ ನಟಿ ಸುಲೋಚನಾ ಲಾತ್ಕರ್

ಮುಂಬೈ:  ಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ನಿಧನರಾಗಿದ್ದಾರೆ.ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು ಎಂದು ಅವರ ಮೊಮ್ಮಗ ಪರಾಗ್ ಅಜ್ಗಾವ್ಕರ್ ತಿಳಿಸಿದ್ದಾರೆ.

 ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂಲತ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಡಕಾಳತಾ ಗ್ರಾಮದವರಾದ  ಸುಲೋಚನಾ ಲಾತ್ಕರ್  1940 ರಲ್ಲಿ ರಂಗಭೂಮಿ ಪ್ರವೇಶ ಮಾಡಿದ್ದರು. ತದನಂತರ ಅವರು ಮರಾಠಿ, ಹಿಂದಿ ಚಿತ್ರರಂಗದಲ್ಲಿ ಹೆಸರುವಾಸಿಯಾಗಿದ್ದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 

1960, 1970 ಮತ್ತು 1980 ರ ದಶಕದ ಸಿನಿಮಾಗಳಲ್ಲಿ ಸುನಿಲ್ ದತ್, ದೇವ್ಆನಂದ್, ರಾಜೇಶ್ ಖನ್ನಾ, ದಿಲೀಪ್ ಕುಮಾರ್ ಮತ್ತು ಅಮಿತಾಭ್ ಬಚ್ಚನ್ ಸೇರಿದಂತೆ ಪ್ರಮುಖ ನಟರ ಜೊತೆಗೆ ಅವರ ಅಭಿನಯಿಸಿದ್ದಾರೆ. ತಾಯಿ ಪಾತ್ರದಲ್ಲಿ ಹೆಚ್ಚಾಗಿ ನಟಿಸಿದ್ದಾರೆ. ಸುಲೋಚನಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ನಟ ರಿತೇಶ್ ದೇಶ್‌ಮುಖ್ ಟ್ವಿಟರ್‌ನಲ್ಲಿ ಸುಲೋಚನಾ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಲಾತ್ಕರ್  ಅವರಿಗೆ ಭಾರತ ಸರ್ಕಾರ  1999 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಅವರು ತಮ್ಮ ಮಗಳು ಕಾಂಚನ್ ಘಾನೇಕರ್ ಅವರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರ ನಾಳೆ ಸಂಜೆ 5 ಗಂಟೆಗೆ ದಾದಾದಲ್ಲಿರುವ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com