ಸಲ್ಮಾನ್ ಖಾನ್ ವಿರುದ್ಧ ಅನುಚಿತ ವರ್ತನೆ ದೂರು: ಬಾಂಬೆ ಹೈಕೋರ್ಟ್ ರದ್ದು

2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. 
ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಮುಂಬೈ: 2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. 

ನಟ ಸಲ್ಮಾನ್ ಖಾನ್ ಅಂಧೇರಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿಲ್ಲ. 2019ರಲ್ಲಿ ಪತ್ರಕರ್ತರೊಬ್ಬರ ಮೇಲೆ ನಟ ಸಲ್ಮಾನ್ ಖಾನ್ ಹಲ್ಲೆ ನಡೆಸಿದ್ದರು ಎಂದು ಪತ್ರಕರ್ತ ಖಾಸಗಿ ದೂರು ನೀಡಿದ್ದರು. ಅಂಧೇರಿಯ ಮೆಟ್ರೊಪಾಲಿಟನ್ ನ್ಯಾಯಾಲಯ ಈ ಹಿಂದೆ ಸಮ್ಮನ್ಸ್ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ?: ನಟ ಸನ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ತಮ್ಮ ಫೋನ್ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತರೊಬ್ಬರು ಸಲ್ಮಾನ್ ಖಾನ್ ವಿರುದ್ಧ ಸಲ್ಲಿಸಿದ್ದ ದೂರನ್ನು ಬಾಂಬೆ ಹೈಕೋರ್ಟ್ ಇಂದು ರದ್ದುಗೊಳಿಸಿದೆ. ನಟ ಹಲ್ಲೆ ಮತ್ತು ದುರ್ನಡತೆಯಲ್ಲಿ ತೊಡಗಿದ್ದಾರೆ ಎಂದು ಪತ್ರಕರ್ತ ಆರೋಪಿಸಿದ್ದರು.

2019ರಲ್ಲಿ ಮುಂಬೈನಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಸಲ್ಮಾನ್ ಖಾನ್ ಮೊಬೈಲ್ ಕಿತ್ತುಕೊಂಡಿದ್ದರು ಎಂದು ದೂರಿನಲ್ಲಿ ಪತ್ರಕರ್ತರು ಆರೋಪಿಸಿದ್ದರು. ದೂರುದಾರರು ಅವರ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ. ಸಲ್ಮಾನ್ ಬೆದರಿಕೆ ತಮಗೆ ಬೆದರಿಕೆ ಕೂಡ ಹಾಕಿದ್ದರು ಎಂದು ದೂರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com