200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ
ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
Published: 24th May 2023 09:13 PM | Last Updated: 25th May 2023 06:14 PM | A+A A-

ಜಾಕ್ವೆಲಿನ್ ಫೆರ್ನಾಂಡಿಸ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
ಐಐಎಫ್‌ಎ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೇ 25 ರಿಂದ ಮೇ 27 ರವರೆಗೆ ಅಬುಧಾಬಿಗೆ ಪ್ರಯಾಣಿಸಬೇಕಾಗಿದೆ ಎಂದು ಫರ್ನಾಂಡೀಸ್ ಅವರು ಸಲ್ಲಿಸಿದ ಅರ್ಜಿಯನ್ನು ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಅಂಗೀಕರಿಸಿದರು.
ಮೇ 28ರಿಂದ ಜೂನ್ 12ರವರೆಗೆ ಇಟಲಿಯ ಮಿಲನ್‌ಗೆ ಪ್ರಯಾಣಿಸಲು ನ್ಯಾಯಾಧೀಶರು ಅವಕಾಶ ಮಾಡಿಕೊಟ್ಟಿದ್ದು ನಟಿ ಚಲನಚಿತ್ರ ಚಿತ್ರೀಕರಣಕ್ಕೆ ಹಾಜರಾಗಬೇಕು ಎಂದು ಹೇಳಿದರು.
ಪ್ರಕರಣದ ಆರೋಪಿಯಾಗಿರುವ ಫರ್ನಾಂಡೀಸ್‌ಗೆ ಕಳೆದ ವರ್ಷ ನವೆಂಬರ್ 15 ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಅವರನ್ನು ಬಂಧಿಸಿರಲಿಲ್ಲ.
ರೆಲಿಗೇರ್ ಎಂಟರ್‌ಪ್ರೈಸಸ್‌ನ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರನ್ನು ವಂಚಿಸಿದ ಮತ್ತು ಸುಲಿಗೆ ಆರೋಪವನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದೆ.