ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1,100 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡ ಶಾರುಖ್ ಖಾನ್ ನಟನೆಯ 'ಜವಾನ್'!

ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ 'ಜವಾನ್' ಸಿನಿಮಾ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1,103.27 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ. ಶುಕ್ರವಾರ ಸಂಜೆ ಪ್ರೊಡಕ್ಷನ್ ಹೌಸ್ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಟ್ವೀಟ್ ಮಾಡಿದ್ದು, ಚಿತ್ರದ ಇತ್ತೀಚಿನ ಕಲೆಕ್ಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಜವಾನ್ ಚಿತ್ರದ ಪೋಸ್ಟರ್
ಜವಾನ್ ಚಿತ್ರದ ಪೋಸ್ಟರ್

ಮುಂಬೈ: ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ 'ಜವಾನ್' ಸಿನಿಮಾ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1,103.27 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಶುಕ್ರವಾರ ಸಂಜೆ ಪ್ರೊಡಕ್ಷನ್ ಹೌಸ್ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಟ್ವೀಟ್ ಮಾಡಿದ್ದು, ಚಿತ್ರದ ಇತ್ತೀಚಿನ ಕಲೆಕ್ಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

'ಜವಾನ್' ಪ್ರತಿದಿನ ಬಾಕ್ಸ್ ಆಫೀಸ್ ದಾಖಲೆಗಳನ್ನು ನಿರ್ಮಿಸುತ್ತಿದೆ ಮತ್ತು ಹಳೆ ದಾಖಲೆಗಳನ್ನು ಮುರಿಯುತ್ತಿದೆ' ಎಂದಿದ್ದು, ಚಿತ್ರದ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಪ್ರದರ್ಶಿಸುವ ಪೋಸ್ಟರ್ ಹಂಚಿಕೊಂಡಿದೆ.

ಅಟ್ಲಿ ನಿರ್ದೇಶನದ ಈ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಚಿತ್ರತಂಡ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ, 'ಜವಾನ್' ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 1,100 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಹಿಂದಿ ಸಿನಿಮಾ ಆಗಿದೆ. ಈ ಪೈಕಿ ಭಾರತದ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ 733.37 ಕೋಟಿ ರೂ. ಆಗಿದ್ದರೆ, ಸಾಗರೋತ್ತರ ಬಾಕ್ಸ್ ಆಫೀಸ್ ಕಲೆಕ್ಷನ್ 369.90 ಕೋಟಿ' ಎಂದಿದೆ. 

ಹಿಂದಿ ಭಾಷೆಯಿಂದ 560.03 ಕೋಟಿ ರೂ. ಗಳನ್ನು ತಲುಪುವ ಮೂಲಕ ಸಿನಿಮಾ 'ದೇಶೀಯ ಮಾರುಕಟ್ಟೆಯಲ್ಲಿ ಬಲಿಷ್ಠವಾದ ಹೆಜ್ಜೆಗುರುತನ್ನು ಮೂಡಿಸಿದೆ' ಎಂದು ಚಿತ್ರತಂಡ ಹೇಳಿದೆ.

'ಇತರ ಭಾಷೆಯ ಡಬ್‌ಗಳಿಂದ 59.89 ಕೋಟಿ ರೂ. ಸಂಗ್ರಹವಾಗಿದೆ. ಒಟ್ಟಾರೆಯಾಗಿ, ಚಿತ್ರವು ಭಾರತದಲ್ಲಿ 619.92 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಮತ್ತು ಈಗಲೂ ಇನ್ನೂ ಉತ್ತಮ ವೇಗದಲ್ಲಿ ಓಡುತ್ತಿದೆ' ಎಂದು ಅವರು ಸೇರಿಸಿದ್ದಾರೆ.

'ಜವಾನ್' ಸಿನಿಮಾದಲ್ಲಿ ಶಾರುಖ್ ಖಾನ್, ವಿಕ್ರಮ್ ರಾಥೋಡ್ ಮತ್ತು ಅವರ ಮಗ ಆಜಾದ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಜೊತೆಗೆ ದೀಪಿಕಾ ಪಡುಕೋಣೆ ಮತ್ತು ಸಂಜಯ್ ದತ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರೆಡ್ ಚಿಲ್ಲಿಸ್ ಎಂಟರ್‌ಟೈನ್‌ಮೆಂಟ್ ಪ್ರಸ್ತುತಪಡಿಸಿರುವ 'ಜವಾನ್' ಸಿನಿಮಾವನ್ನು ಗೌರಿ ಖಾನ್ ನಿರ್ಮಿಸಿದ್ದಾರೆ ಮತ್ತು ಗೌರವ್ ವರ್ಮಾ ಸಹ-ನಿರ್ಮಾಣ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com