ಶ್ರೀವಲ್ಲಿಗೆ ಬಾಲಿವುಡ್‌ನಲ್ಲಿ ಬೇಡಿಕೆ; ಶೀಘ್ರದಲ್ಲೇ ಸೆಟ್ಟೇರಲಿದೆ ವಿಕ್ಕಿ ಕೌಶಲ್- ರಶ್ಮಿಕಾ ಮಂದಣ್ಣ ಅಭಿನಯದ 'ಛಾವಾ'

ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮುಂಬರುವ ಹಿಂದಿ ಸಿನಿಮಾ 'ಛಾವಾ' ಮುಂದಿನ ತಿಂಗಳು ಸೆಟ್ಟೇರಲಿದೆ. ಚಿತ್ರದ ಪ್ರಧಾನ ಛಾಯಾಗ್ರಹಣ ಅಕ್ಟೋಬರ್‌ನಲ್ಲಿ ಪ್ರಾರಂಭವಾಗಲಿದೆ. 'ಛಾವಾ' ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಲಿದ್ದಾರೆ.
ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ
ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ

ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮುಂಬರುವ ಹಿಂದಿ ಸಿನಿಮಾ 'ಛಾವಾ' ಮುಂದಿನ ತಿಂಗಳು ಸೆಟ್ಟೇರಲಿದೆ. ಚಿತ್ರದ ಪ್ರಧಾನ ಛಾಯಾಗ್ರಹಣ ಅಕ್ಟೋಬರ್‌ನಲ್ಲಿ ಪ್ರಾರಂಭವಾಗಲಿದೆ. 'ಛಾವಾ' ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಲಿದ್ದಾರೆ.

'ಛಾವಾ' ಐತಿಹಾಸಿಕ ಕಥೆಯನ್ನು ಒಳಗೊಂಡ ಸಿನಿಮಾ ಆಗಿದ್ದು, ಮರಾಠಾ ಸಾಮ್ರಾಜ್ಯದ ಸಂಸ್ಥಾಪಕ ಮತ್ತು ಮಹಾನ್ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ ಸಂಭಾಜಿ ಮಹಾರಾಜರ ಪತ್ನಿ ಯೇಸುಬಾಯಿ ಭೋನ್ಸಾಲೆ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ.

ರಾಜನ ತ್ಯಾಗ ಮತ್ತು ಯುದ್ಧದ ತಂತ್ರಗಳ ಬಗ್ಗೆ ಪ್ರೇಕ್ಷಕರಿಗೆ ತಿಳಿಸುವಾಗ, ಸಂಭಾಜಿ ಅವರ ಪತ್ನಿ ಯೇಸುಬಾಯಿಯ ಮೇಲಿನ ಅವರ ಪ್ರೀತಿಯನ್ನು ಸಿನಿಮಾ ಭಾಗಶಃ ಕೇಂದ್ರೀಕರಿಸುತ್ತದೆ.

ಇತ್ತೀಚೆಗೆ ಬಿಡುಗಡೆಯಾದ 'ಜರಾ ಹತ್ಕೆ ಜರಾ ಬಚ್ಕೆ' ನಂತರ ವಿಕ್ಕಿ ಕೌಶಲ್ ಮತ್ತು ಲಕ್ಷ್ಮಣ್ ಅವರು 'ಛಾವಾ' ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮ್ಯಾಡಾಕ್ ಫಿಲ್ಮ್ಸ್ ಬೆಂಬಲ ನೀಡಿದೆ.

ಈಮಧ್ಯೆ, ವಿಕ್ಕಿ ಕೌಶಲ್ ಅವರು 'ದಿ ಗ್ರೇಟ್ ಇಂಡಿಯನ್ ಫ್ಯಾಮಿಲಿ' ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಚಿತ್ರವು ಸೆಪ್ಟೆಂಬರ್ 22 ರಂದು ಬಿಡುಗಡೆಯಾಗಲಿದೆ. ಅಲ್ಲದೆ, ಸ್ಯಾಮ್ ಬಹದ್ದೂರ್, ಡುಂಕಿ ಮತ್ತು ಮೇರೆ ಮೆಹಬೂಬ್ ಮೇರೆ ಸನಮ್‌ನಂತಹ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಿಷನ್ ಮಜ್ನು ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ರಶ್ಮಿಕಾ ಅವರು ಅನಿಮಲ್, ರೇನ್‌ಬೋ ಮತ್ತು ಪುಷ್ಪ 2: ದಿ ರೂಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com