ಮುಂಬೈ: ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟ ರಣವೀರ್ ಸಿಂಗ್ ಅವರ ಡೀಪ್ ಫೇಕ್ ವಿಡಿಯೋ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇತ್ತೀಚಿಗೆ ರಣವೀರ್ ಸಿಂಗ್ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಎನ್ ಐ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವೊಂದು ಅಂಶಗಳನ್ನು ಹಂಚಿಕೊಂಡಿದ್ದರು. ಈ ವಿಡಿಯೋಗೆ ಎಐ ವಾಯ್ಸ್ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ. ರಣವೀರ್ ಸಿಂಗ್ ಅವರು ಬೆಲೆ ಏರಿಕೆ, ನಿರುದ್ಯೋಗ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ ಎನ್ನುವ ಹಾಗೆ ವಿಡಿಯೋವನ್ನು ತಿರುಚಲಾಗಿದೆ.
ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದು, ರಣವೀರ್ ಸಿಂಗ್ ಅವರ ಡೀಪ್‌ಫೇಕ್ ವೀಡಿಯೊ ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಣವೀರ್ ಸಿಂಗ್ ವಕ್ತಾರರು ತಿಳಿಸಿದ್ದಾರೆ.
ನಟ ಅಮೀರ್ ಖಾನ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಡೀಪ್‌ಫೇಕ್ ವಿಡಿಯೋ ವೈರಲ್ ಆಗಿತ್ತು. ನಂತರ ಮುಂಬೈ ಪೊಲೀಸರು ಅನಾಮಧೇಯ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
Advertisement