ತುಂಬಾ ಜನ ನನ್ನ ಹಿಂದೆ ಬಿದ್ದಿದ್ದಾರೆ: ಸಿಖಂದರ್ ಟೀಸರ್ ಮೂಲಕ ಸಲ್ಮಾನ್ ಟಾಂಗ್ ಕೊಟ್ಟಿದ್ಯಾರಿಗೆ?

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಬಹಿರಂಗವಾಗಿಯೇ ನಾನು ಸಲ್ಮಾನ್ ಖಾನ್ ನನ್ನು ಹತ್ಯೆ ಮಾಡುತ್ತೇನೆ ಎಂದು ಹೇಳಿದ್ದರು.
Lawrence Bishnoi-Salman Khan
ಲಾರೆನ್ಸ್ ಬಿಷ್ಣೋಯ್-ಸಲ್ಮಾನ್ ಖಾನ್
Updated on

ಬಾಲಿವುಡ್‌ ನಟ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಸಿಖಂದರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್ ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಟೀಸರ್ ನಲ್ಲಿ ಹೊಡೆದಿರುವ ಡೈಲಾಗ್ ಒಂದು ವೈರಲ್ ಆಗಿದೆ. ಹೌದು... ಸಲ್ಮಾನ್ ಖಾನ್ ಚಿತ್ರದಲ್ಲಿ ತಮ್ಮನ್ನು ಹೊಡೆಯಲು ಬಂದ ವಿಲನ್ ಗಳಿಗೆ ತುಂಬಾ ಜನ ನನ್ನ ಹಿಂದೆ ಬಿದ್ದಿದ್ದಾರೆ ಎಂದು ಕೇಳಿದ್ದೇನೆ. ಆದರೆ ನಾನು ತಿರುಗಿ ಬೀಳುವವರೆಗೆ ಮಾತ್ರ ಎಂದು ಸಲ್ಮಾನ್ ಖಡಕ್ ಆಗಿ ಡೈಲಾಗ್ ಹೊಡೆದಿದ್ದಾರೆ. ಈ ಮೂಲಕ ರಿಯಲ್ ಆಗಿಯೂ ಎದುರಾಳಿಗಳಿಗೆ ಠಕ್ಕರ್ ಕೊಡುವಂತಿದೆ. ಈ ಡೈಲಾಗ್ ಇದೀಗ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಬಹಿರಂಗವಾಗಿಯೇ ನಾನು ಸಲ್ಮಾನ್ ಖಾನ್ ನನ್ನು ಹತ್ಯೆ ಮಾಡುತ್ತೇನೆ ಎಂದು ಹೇಳಿದ್ದರು. ಅಷ್ಟೇ ಅಲ್ಲದೆ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಸಹ ನಡೆದಿತ್ತು. ಇದನ್ನು ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಿಕೊಂಡಿತ್ತು. ಹೀಗಾಗಿ ಬಿಗಿ ಭದ್ರತೆಯಲ್ಲಿ ಸಲ್ಮಾನ್ ಖಾನ್ ಓಡಾಡುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com