ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು

ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಿಥುನ್ ಚಕ್ರವರ್ತಿ
ಮಿಥುನ್ ಚಕ್ರವರ್ತಿ

ಕೋಲ್ಕತಾ: ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ನಟ ಮತ್ತು ಬಿಜೆಪಿ ನಾಯಕ (BJP Leader) ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಿಢೀರ್ ಎದೆ ನೋವು (Chest Pain) ಕಾಣಿಸಿಕೊಂಡಿದ್ದು, ಶನಿವಾರ ಬೆಳಗ್ಗೆ ಮಿಥುನ್ ದಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತೀವ್ರ ನಿಗಾಘಟಕದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ನಟ ಮತ್ತು ರಾಜಕಾರಣಿ ಮಿಥುನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com