ಶಾರುಖ್ ಖಾನ್ 'ಡಂಕಿ' ಧಮಾಕ: ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ. ಗಳಿಕೆ!

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಡಂಕಿ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ವಿಶ್ವದಾದ್ಯಂತ ಒಟ್ಟು 400 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಮಂಗಳವಾರ ತಿಳಿಸಿದ್ದಾರೆ.
ಡಂಕಿ ಚಿತ್ರದಲ್ಲಿ ನಟ ಶಾರುಖ್ ಖಾನ್
ಡಂಕಿ ಚಿತ್ರದಲ್ಲಿ ನಟ ಶಾರುಖ್ ಖಾನ್

ಮುಂಬೈ: ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಡಂಕಿ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ವಿಶ್ವದಾದ್ಯಂತ ಒಟ್ಟು 400 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಮಂಗಳವಾರ ತಿಳಿಸಿದ್ದಾರೆ.

ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಿದ ಈ ಹಾಸ್ಯ ಚಿತ್ರ ಡಿಸೆಂಬರ್ 21 ರಂದು ಬಿಡುಗಡೆಯಾಗಿದ್ದು, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿತ್ತು.

ಡಂಕಿ ಚಲನಚಿತ್ರವು ಜಾಗತಿಕವಾಗಿ 400.40 ಕೋಟಿ ರೂಪಾಯಿ ಗಳಿಸಿದೆ ಎಂದು ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಎಂದು ತಿಳಿಸಿದೆ.

ಡಂಕಿ ಚಿತ್ರದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. 

ಕತೆಯ ಆಯ್ಕೆಯಲ್ಲಿ ಪ್ರತಿಬಾರಿ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಸಿನಿಪ್ರೇಮಿಗಳಿಗೆ ಗೊತ್ತಿರುವ ಸಂಗತಿ. ಅದೇ ರೀತಿ ಈ ಚಿತ್ರದಲ್ಲಿ ಕೆಲಸ ಅರಸಿ ಅಕ್ರಮವಾಗಿ ದೇಶಗಳ ಗಡಿ ದಾಟುವವರ ಕಥೆಯನ್ನು ಡಂಕಿ ಮೂಲಕ ತೋರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com