ನಟ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು; ಶಸ್ತ್ರಚಿಕಿತ್ಸೆ!

ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್
Updated on: 

ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇತ್ತೀಚಿಗೆ ಚಿತ್ರದ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವಾಗ ಸೈಫ್ ಸಾಕಷ್ಟು ಗಾಯದ ಸಮಸ್ಯೆ ಎದುರಿಸಿದ್ದರು. ಹೀಗಾಗಿ ಮೊಣಕಾಲು ಮತ್ತು ಟ್ರೈಸ್ಪ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈಗ ಅವರ ಸ್ಥಿತಿ ಉತ್ತಮವಾಗಿದ್ದು, ಶೀಘ್ರ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ನಟ ತಮ್ಮ ಎಲ್ಲಾ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಧನ್ಯವಾದ ಹೇಳಿದ್ದಾರೆ.

ಜೂನಿಯರ್ ಎನ್ ಟಿಆರ್ ನಟನೆಯ 'ದೇವರ' ಚಿತ್ರೀಕರಣದ ವೇಳೆ ಸೈಫ್ ಅವರ ಮೊಣಕಾಲು ಮತ್ತು ಭುಜಕ್ಕೆ ಗಾಯವಾಗಿದ್ದರು. ಚಿತ್ರದಲ್ಲಿನ ಆಕ್ಷನ್ ಸೀಕ್ವೆನ್ಸ್‌ನ ಚಿತ್ರೀಕರಣದ ಸಮಯದಲ್ಲಿ ಅವರಿಗೆ ಹಳೆಯ ಗಾಯದ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಟ್ರೈಸ್ಪ್ ಶಸ್ತ್ರಚಿಕಿತ್ಸೆಯಾಗಿದೆ.

ಅಷ್ಟೇ ಅಲ್ಲ ವಿಶಾಲ್ ಭಾರದ್ವಾಜ್ ಅಭಿನಯದ 'ರಂಗೂನ್' ಸಿನಿಮಾದ ಶೂಟಿಂಗ್ ವೇಳೆಯೂ ಸೈಫ್ ಗಾಯಗೊಂಡಿದ್ದರು. ಅವರು ಕ್ರೇಪ್ ಬ್ಯಾಂಡೇಜ್ ಅನ್ನು ಹಲವು ಬಾರಿ ಧರಿಸಿದ್ದರು. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣದ ವೇಳೆ ಅವರ ಹೆಬ್ಬೆರಳಿಗೆ ಗಾಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com