ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Published on

ಮುಂಬಯಿ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅಮಿತಾಬ್ ಬಚ್ಚನ್ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವರದಿಯ ಪ್ರಕಾರ, ಬಿಗ್ ಬಿ ಅವರನ್ನು ಬಿಗಿ ಭದ್ರತೆಯ ನಡುವೆ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ಶಸ್ತ್ರಚಿಕಿತ್ಸೆಯ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಅಮಿತಾಬ್ ಬಚ್ಚನ್
ಐಎಸ್ ಪಿಎಲ್ ನ ಮುಂಬೈ ತಂಡದ ಮಾಲೀಕತ್ವ ಪಡೆದ ಬಿಗ್ ಬಿ ಅಮಿತಾಬ್ ಬಚ್ಚನ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com