ಗಂಭೀರ ಹೃದಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟಿ ರಾಖಿ ಸಾವಂತ್!

ಬಾಲಿವುಡ್​ ನಟಿ ರಾಖಿ ರಾಖಿ ಸಾವಂತ್ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟಿದೆ, ತರಾತುರಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಮಸ್ಯೆಯಿಂದ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್
ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್
Updated on

ಮುಂಬೈ: ಬಾಲಿವುಡ್​ ನಟಿ ರಾಖಿ ರಾಖಿ ಸಾವಂತ್ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟಿದೆ, ತರಾತುರಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಮಸ್ಯೆಯಿಂದ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಟಿ ಆಸ್ಪತ್ರೆಯ ಬೆಡ್ ಮೇಲಿರುವ ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಹೃದಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ರಾಖಿ ಸಾವಂತ್ ಅವರ ಈ ಫೋಟೋಗಳನ್ನು ನೋಡಿದರೆ ಆಕೆಗೆ ಪ್ರಜ್ಞೆ ಇಲ್ಲದೇ ಮಲಗಿದ್ದಾರಾ ಅಥವಾ ಗಾಢ ನಿದ್ರೆಯಲ್ಲಿದ್ದಾರೋ ಎಂಬುದು ತಿಳಿದಿಲ್ಲ. ಫೋಟೋದಲ್ಲಿ ನರ್ಸ್ ಬಿಪಿ ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನೂ ಅಳವಡಿಸಲಾಗಿದೆ. ಸದ್ಯ ಆಕೆಗೆ ಗಂಭೀರ ಹೃದಯ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಟಿಗೆ ಏನಾಗಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್
ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರ ಬಂಧನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com