
ಭೋಪಾಲ್: ಖ್ಯಾತ ಬಾಲಿವುಡ್ ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ ರಾಜ್‌ಕುಮಾರ್ ಹಿರಾನಿ ಅವರಿಗೆ ಮಧ್ಯಪ್ರದೇಶ ಸರ್ಕಾರದ 2023ನೇ ಸಾಲಿನ ರಾಷ್ಟ್ರೀಯ ಕಿಶೋರ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಖ್ಯಾತ ಗಾಯಕ ಕಿಶೋರ್ ಕುಮಾರ್ ಅವರ ಜನ್ಮಸ್ಥಳವಾದ ಖಾಂಡ್ವಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಧ್ಯ ಪ್ರದೇಶ ಬುಡಕಟ್ಟು ವ್ಯವಹಾರಗಳು ಮತ್ತು ಭೋಪಾಲ್ ಅನಿಲ ದುರಂತ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ಶಾ ಅವರು ಹಿರಾನಿ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಾನಿ, ಕಿಶೋರ್ ಕುಮಾರ್ ಅವರು ತಮ್ಮ ಅಚ್ಚುಮೆಚ್ಚಿನ ಗಾಯಕರಾಗಿದ್ದು, ಅಂತಹ ಮಹೋನ್ನತ ವ್ಯಕ್ತಿತ್ವದ ಹೆಸರಿನ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ ಎಂದರು.
ರಾಜ್ಯ ಸರ್ಕಾರದ ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಹೊಂದಿದ್ದು, ಚಿತ್ರಕಥೆ, ನಿರ್ದೇಶನ ಮತ್ತು ಹಿನ್ನೆಲೆ ಗಾಯನಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ನಿರ್ದೇಶಕ(ಸಂಸ್ಕೃತಿ) ಎನ್‌ಪಿ ನಾಮದೇವ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಮುನ್ನಾಭಾಯ್ ಎಂಬಿಬಿಎಸ್(2003), ಲಗೇ ರಹೋ ಮುನ್ನಾಭಾಯ್(2006) ಮತ್ತು ತ್ರೀ ಈಡಿಯಟ್ಸ್ (2009) ನಂತಹ ಬ್ಲಾಕ್‌ಬಸ್ಟರ್‌ಗಳನ್ನು ಹಿರಾನಿ ದೇಶದ ಅತ್ಯಂತ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.
Advertisement