
ಮುಂಬೈ: ಬಾಲಿವುಡ್ ನಟಿ ಹಾಗೂ ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಬುಧವಾರ ಬೆಳಗ್ಗೆ ಮುಂಬೈನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕಸ್ಮಿಕವಾಗಿ ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಮುಂಚೆ ಅನಿಲ್ ಅರೋರಾ ಅವರು ಬಾಂದ್ರಾ ಪ್ರದೇಶದ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.
ಘಟನೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಏತನ್ಮಧ್ಯೆ, "ಮಲೈಕಾ ಅವರ ತಂದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದೊಂದು ಅಪಘಾತವಾಗಿದೆ. ಅವರಿಗೆ ಯಾವುದೇ ಕಾಯಿಲೆ ಇಲ್ಲ. ಈ ಘಟನೆಯಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ" ಪೊಲೀಸ್ 'ಪಂಚನಾಮೆಯಿಂದ' ವಿಷಯ ಸ್ಪಷ್ಟವಾಗಲಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
Advertisement