ಸಾವಿನ ಕುರಿತು ಸುಳ್ಳು ಸುದ್ದಿ: ನಟಿ ಪೂನಂ ಪಾಂಡೆ ವಿರುದ್ಧ FIR ದಾಖಲು!

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸಲು ತಮ್ಮದೇ ಸಾವಿನ ಕುರಿತು ಸುಳ್ಳು ಸುದ್ದಿ ಹರಡಿದ್ದ ನಟಿ ಪೂನಂ ಪಾಂಡೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
ಪೂನಂ ಪಾಂಡೆ
ಪೂನಂ ಪಾಂಡೆ

ಮುಂಬೈ: ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸಲು ತಮ್ಮದೇ ಸಾವಿನ ಕುರಿತು ಸುಳ್ಳು ಸುದ್ದಿ ಹರಡಿದ್ದ ನಟಿ ಪೂನಂ ಪಾಂಡೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ವಕೀಲ ಅಲಿ ಕಾಶಿಪ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೂನಂ ಪಾಂಡೆ ಮತ್ತು ಆಕೆಯ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ. ಈ ಪ್ರಕರಣದ ಕುರಿತಂತೆ ಪೂನಂ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. 

ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಸಾಮಾಜಿಕ ಜಾಲತಾಣ ಇನ್ಸ್ ಟ್ರಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com