
ಬಾಲಿವುಡ್ ನಟ ಸನ್ನಿ ಡಿಯೋಲ್ ಅಭಿನಯದ 'ಜಾಟ್' ಚಿತ್ರ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 102.13 ಕೋಟಿ ರೂ. ಗಳಿಸಿದೆ ಎಂದು ನಿರ್ಮಾಪಕರು ಸೋಮವಾರ ತಿಳಿಸಿದ್ದಾರೆ.
ಗೋಪಿಚಂದ್ ಮಲಿನೇನಿ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿವೆ. ಜಾಟ್ ಚಿತ್ರ ಇದೇ ಏಪ್ರಿಲ್ 10 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.
ಮೈತ್ರಿ ಮೂವಿ ಮೇಕರ್ಸ್ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಹಂಚಿಕೊಂಡಿದೆ.
"ಸಾಮೂಹಿಕ ಕಮರ್ಷಿಯಲ್ ಸಿನಿಮಾದ ಸಂಭ್ರಮ. ಸಿಂಗಲ್ ಸ್ಕ್ರೀನ್‌ಗಳಿಗೆ ಹಬ್ಬ ಮುಂದುವರೆದಿದೆ. #JAAT ವಿಶ್ವಾದ್ಯಂತ 102.13 ಕೋಟಿ ರೂ. ಗಳಿಸಿದೆ" ಎಂದು ಮೈತ್ರಿ ಮೂವಿ ಮೇಕರ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಈ ಚಿತ್ರದಲ್ಲಿ ರಣದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್ ಮತ್ತು ಸಯಾಮಿ ಖೇರ್ ಕೂಡ ನಟಿಸಿದ್ದಾರೆ.
Advertisement