
ಮೂರು ದಶಕಗಳ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ರಾಷ್ಟ್ರೀಯ ಪ್ರಶಸ್ತಿ ಸಂದಿದೆ. ಪ್ರತಿಷ್ಠಿತ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು, 'ಜವಾನ್' ಚಿತ್ರದ ಅತ್ಯುತ್ತಮ ನಟನೆಗಾಗಿ ಪ್ರಶಸ್ತಿಯನ್ನು ಶಾರೂಖ್ ಖಾನ್ ಗೆದ್ದುಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾರೂಖ್ ಖಾನ್, ಕೃತಜ್ಞತೆ, ಹೆಮ್ಮೆ ಮತ್ತು ನಮ್ರತೆಯಿಂದ ಮುಳುಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದ್ದು, ಈ ಹಾದಿಯಲ್ಲಿ ಮತ್ತಷ್ಟು ಮುಂದುವರೆಲು, ಶ್ರಮ ವಹಿಸಿ ಸಿನಿಮಾ ಮಾಡಲು ಮತ್ತು ಸಿನಿಮಾ ಕ್ಷೇತ್ರದಲ್ಲಿ ಮುಂದುವರೆಯಲು ಪ್ರೋತ್ಸಾಹಿಸಿದೆ ಎಂದು ತಮ್ಮ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಸಂದೇಶದಲ್ಲಿ ಪ್ರತಿಕ್ರಿಯಿದ್ದಾರೆ.
ಶಾರೂಕ್ ಖಾನ್ ಬಲಗೈಗೆ ಗಾಯವಾಗಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರ ಮುಂದಿನ ಕಿಂಗ್ ಚಿತ್ರದ ಚಿತ್ರೀಕರಣದ ವೇಳೆಯಲ್ಲಿ ಆದ ಗಾಯ ಇದಾಗಿದೆ. ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರುವುದು ಕೇವಲ ಸಾಧನೆಗಾಗಿ ಅಲ್ಲ. ನಾನು ಏನು ಮಾಡ್ತೇನೆ ಎಂಬುದನ್ನು ನೆನಪಿಸುತ್ತದೆ. ಚಿತ್ರರಂಗದಲ್ಲಿ ಮತ್ತಷ್ಟು ಶ್ರಮಪಟ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸಿದೆ. ನಟನೆ ಕೇವಲ ಕೆಲಸ ಮಾತ್ರವಲ್ಲ ಜವಾಬ್ದಾರಿ ಎಂಬುದು ತಿಳಿಸಿಕೊಟ್ಟಿದೆ. ನನ್ನ ಮೇಲಿನ ಪ್ರೀತಿಗಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
2023ನೇ ಸಾಲಿನ ರಾಷ್ಟ್ರೀಯ ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿ ಅಧ್ಯಕ್ಷ ಅಶುತೋಷ್ ಗೋವಾರಿಕ್ ಘೋಷಿಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮ್ಯಾಸಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
Advertisement