

ಬಾಲಿವುಡ್ ನಟ ರಣ್ವೀರ್ ಸಿಂಗ್ ನಟನೆಯ 'ಧುರಂಧರ್' ಬಾಕ್ಸಾಫೀಸ್ ಕೊಳ್ಳೆ ಹೊಡೆದು ಯಶಸ್ವೀ ಪ್ರದರ್ಶನ ಕಾಣುತ್ತಿದ್ದು, ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ.
‘ಧರುಂಧರ್’ ಸಿನಿಮಾ ಡಿಸೆಂಬರ್ 5 ರಂದು ಕೇವಲ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗುತ್ತಲೇ ನಿರ್ದೇಶಕ ಆದಿತ್ಯ ಧಾರ್ ಅವರು, ಧುರಂಧರ್ 2 ಚಿತ್ರವನ್ನು ಮಾರ್ಚ್ 19 ರಂದು ಈದ್ ಹಬ್ಬದಂದು ಬಿಡುಗಡೆ ಮಾಡುವುದಾಗಿ ಬುಧವಾರ ಘೋಷಿಸಿದ್ದಾರೆ.
ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ಸ್ಪೈ ಥ್ರಿಲ್ಲರ್ ಆಗಿದ್ದು, ರಣ್ವೀರ್ ಸಿಂಗ್ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಅಕ್ಷನ್ ಖನ್ನ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾನಲ್ಲಿ ಮಾಧವನ್ ಸಹ ನಟಿಸಿದ್ದಾರೆ.
ಡಿಸೆಂಬರ್ 5 ರಂದು ಬಿಡುಗಡೆಯಾದ ‘ಧರುಂಧರ್’ಭಾರತದಲ್ಲಿ 597 ಕೋಟಿ ರೂ.ಗಳನ್ನು ಗಳಿಸುವ ಮೂಲಕ ಮತ್ತು ಇದುವರೆಗೆ ಅತಿ ಹೆಚ್ಚು ಗಳಿಸಿದ ಭಾರತೀಯ ಚಿತ್ರಗಳಲ್ಲಿ ಟಾಪ್ 10 ಸ್ಥಾನವನ್ನು ಪಡೆದಿದೆ.
ಧುರಂಧರ್ 2 ಅನ್ನು ಮಾರ್ಚ್ 19, 2026 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ತಯಾರಕರು ಅಧಿಕೃತವಾಗಿ ಘೋಷಿಸಿದ್ದಾರೆ, ಇದು ಐದು ಭಾಷೆಗಳಲ್ಲಿ ಪ್ಯಾನ್-ಇಂಡಿಯಾ ಮತ್ತು ಜಾಗತಿಕವಾಗಿ ಬಿಡುಗಡೆಯಾಗಲಿದೆ.
Advertisement