
ಮುಂಬೈ: ಮನೆಯೊಳಗೆ ನುಗ್ಗಿದ ಆಗಂತುಕನಿಂದ ಹಲ್ಲೆಗೊಳಗಾಗಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಈಗ ಚೇತರಿಸಿಕೊಳ್ಳುತ್ತಿದ್ದು, ಎರಡು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ವೈದ್ಯರು ಶನಿವಾರ ತಿಳಿಸಿದ್ದಾರೆ.
ಕಳೆದ ಗುರುವಾರ ನಸುಕಿನ ಜಾವ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ನಡೆದ ದಾಳಿಯಲ್ಲಿ 54 ವರ್ಷದ ಸೈಫ್ ಆಲಿಖಾನ್ ಅವರ ಕುತ್ತಿಗೆ ಮತ್ತು ಬೆನ್ನುಮೂಳೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿತದ ಗಾಯಗಳಾಗಿವೆ.
ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಲಾಗಿದೆ. ಐಸಿಯುನಿಂದ ಹೊರಗೆ ಅವರನ್ನು ಶಿಫ್ಟ್ ಮಾಡಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡುವ ನಿರೀಕ್ಷೆಯಿದೆ ಎಂದರು.
"ನಾವು ಅವರ ಆರೋಗ್ಯವನ್ನು ಗಮನಿಸುತ್ತಿದ್ದೇವೆ. ಅವರಿಗೆ ಬೆಡ್ ರೆಸ್ಟ್ ಅಗತ್ಯವಿದೆ. ಎರಡು ಮೂರು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಲೀಲಾವತಿ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ ಹೇಳಿದ್ದಾರೆ.
Advertisement